ಕಡಲು ಸೇರುವ ಪ್ಲಾಸ್ಟಿಕ್ ನಿಯಂತ್ರಣಕ್ಕೆ 840 ಕೋಟಿ ರು. ಯೋಜನೆ: ಸಚಿವ ಈಶ್ವರ ಖಂಡ್ರೆ
ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮ ಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ ಕೆ. ಶೋರ್- ಬ್ಲೂ ಪ್ಯಾಕ್ ಯೋಜನೆಗೆ ಸಮರ್ಪಕವಾದ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಗಳೂರು (ಆ.09): ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರವನ್ನು ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮ ಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ ಕೆ. ಶೋರ್- ಬ್ಲೂ ಪ್ಯಾಕ್ ಯೋಜನೆಗೆ ಸಮರ್ಪಕವಾದ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಹಿರಿಯ ಪರಿಸರ ಅರ್ಥಶಾಸ್ತ್ರಜ್ಞ ಮತ್ತು ಕಾರ್ಯ ಗುಂಪಿನ ನಾಯಕ ಪಾಬ್ಲೋ ಸಿ. ಬೆನಿಟೆಜ್ ನೇತೃತ್ವದ ವಿಶ್ವಬ್ಯಾಂಕ್ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ ಅವರು, 317 ಕಿ.ಮೀ. ಕರುನಾಡ ಕರಾವಳಿಯಲ್ಲಿ ಪ್ರತಿನಿತ್ಯ 50 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬುದು ಆಘಾತಕಾರಿ ಅಂಶ. ಇದರಿಂದ ಸಮುದ್ರ ತಟಕ್ಕೆ ಬಂದು ಮೊಟ್ಟೆಇಟ್ಟು ಮರಿ ಮಾಡುವ ಆಮೆ ಮೊದಲಾದ ಜಲಚರಗಳ ಸಂತಾನೋತ್ಪತ್ತಿಗೆ ಬಾಧಕವಾಗುತ್ತಿದೆ ಎಂಬ ಅಂಶದ ಬಗ್ಗೆ ಸಚಿವರು ವ್ಯಾಕುಲ ವ್ಯಕ್ತಪಡಿಸಿದರು.
ಎನ್‌ಆರ್‌ಐ ಫೋರಂಗೆ ಬಲ ತುಂಬಲು ಅನಿವಾಸಿ ಕನ್ನಡಿಗರ ಆಗ್ರಹ
ಮಾನವ ಮತ್ತು ಸಮಸ್ತ ಜೀವಸಂಕುಲದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿರುವ ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸುವಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಿದೆ ಎಂದು ಪ್ರತಿಪಾದಿಸಿದ ಖಂಡ್ರೆ, ಕರುನಾಡ ಕರಾವಳಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುತ್ತಿರುವ ದುಷ್ಪರಿಣಾಮ ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿ ಆಗಬಹುದು ಎಂದು ತಿಳಿಸಿದರು. ನಿಯೋಗದಲ್ಲಿದ್ದ ಸದಸ್ಯರು, ಕರಾವಳಿಯ ಮೀನುಗಾರರು ಮೀನುಗಾರಿಕೆಗೆ ವಿರಾಮವಿದ್ದ ಸಂದರ್ಭದಲ್ಲಿ ಕಡಲ ತಡಿಯಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯ ತೆರವು ಮಾಡಬಹುದು. ಮೀನು ಹಿಡಿಯುವುದಕ್ಕಿಂತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವೇ ಅವರಿಗೆ ಹೆಚ್ಚು ಲಾಭದಾಯಕ ಆಗುತ್ತದೆ ಎಂದು ತಿಳಿಸಿದರು.
3177 ಕೋಟಿ ವೆಚ್ಚದಲ್ಲಿ 318 ಮೆಟ್ರೋ ಬೋಗಿ ನಿರ್ಮಾಣದ ಗುತ್ತಿಗೆ ಬೆಮೆಲ್‌ಗೆ
ಬ್ಲೂ ಪ್ಯಾಕ್ ಯೋಜನೆಯ ಒಟ್ಟು ಮೊತ್ತ 840 ಕೋಟಿ ರು. ಆಗಿದ್ದು, ಇದರಲ್ಲಿ ಶೇ.70ರಷ್ಟನ್ನು ವಿಶ್ವ ಬ್ಯಾಂಕ್ ಸಾಲದ ರೂಪದಲ್ಲಿ ನೀಡಲಿದೆ. ರಾಜ್ಯ ಸರ್ಕಾರ ಶೇ.30ರಷ್ಟುಭರಿಸಬೇಕಾಗುತ್ತದೆ. ಪ್ರಾಥಮಿಕ ಯೋಜನಾ ವರದಿ (ಪಿಪಿಆರ್)ಗೆ ನೀತಿ ಆಯೋಗ ಮತ್ತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಬೆಂಬಲವಿದೆ ಎಂದು ಅಧಿಕಾರಿಗಳು ವಿವರಿಸಿದರು. ಈ ಸಂದರ್ಭ ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಮತ್ತು ವಿಜಯ ಮೋಹನ್‌ರಾಜ್ ಮತ್ತಿತರರರು ಇದ್ದರು.