ಕರ್ನಾಟಕದಲ್ಲಿ ಇಂದು (ಬುಧವಾರ) ಕೊರೋನಾ ಮಹಾ ಸ್ಫೋಟವೇ ಆಗಿದ್ದು, ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.

ಬೆಂಗಳೂರು, (ಆ.19) : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಇಂದು (ಬುಧವಾರ)) ರಾಜ್ಯದಲ್ಲಿ 8642 ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,49,590ಕ್ಕೇರಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ರಾಜ್ಯದಲ್ಲಿ ಬುಧವಾರ 126 ಜನರು ಬಲಿಯಾಗಿದ್ದು, ಇದರೊಂದಿಗೆ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 4327ಕ್ಕೆ ಏರಿದೆ.

ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಿಸುವಲ್ಲಿ ಉತ್ತರ ಕನ್ನಡ ರಾಜ್ಯಕ್ಕೆ ಮಾದರಿ

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 7201 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 164150 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ 81097 ಸಕ್ರಿಯ ಪ್ರಕರಣಗಳಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ.