ಹೊಸ ರೂಪಾಂತರ ವೈರಸ್ ಭೀತಿಯ ಮಧ್ಯೆ ಕೊರೋನಾ ಮಹಾಮಾರಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಹಾಗಾದ್ರೆ, ಜನವರಿ 2 ಅಂಕಿ-ಸಂಖ್ಯೆ ಎಷ್ಟು ಎನ್ನುವ ಮಾಹಿತಿ ಇಲ್ಲಿದೆ...

ಬೆಂಗಳೂರು, (ಡಿ.02): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು (ಶನಿವಾರ) 755 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,21,128ಕ್ಕೆ ಏರಿಕೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 3 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,099ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಸೈಲೆಂಟಾಗಿ ಹರಡುತ್ತಿದೆ ಹೊಸ ವೈರಸ್: ಮಾಹಿತಿ ಕೊಟ್ಟ ಸುಧಾಕರ್

ಶನಿವಾರ ಬೆಂಗಳೂರಿನಲ್ಲಿ 343 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,89,193ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿನಿಂದ ಒಬ್ಬರು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಜ.02ರಂದು 976 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,98,176ಕ್ಕೆ ಏರಿಕೆಯಾಗಿದೆ. ಇನ್ನು 10,834 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 189 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.