ಕರ್ನಾಟಕದಲ್ಲಿ ಹೊಸ ರೂಪಾಂತರ ವೈರಸ್ ಮಧ್ಯೆ ಈ ಚೀನಾದಿಂದ ಬಂದ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. ಹಾಗಾದ್ರೆ ವರ್ಷದ ಆರಂಭ ದಿನದ ಅಂಕಿ-ಸಂಖ್ಯೆ ಎಷ್ಟು..? 

ಬೆಂಗಳೂರು, (ಜ.01): ರಾಜ್ಯದಲ್ಲಿ ಇಂದು (ಶುಕ್ರವಾರ) 877 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,20,737ಕ್ಕೆ ಏರಿಕೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 6 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,096ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ ಹೊಸ ರೂಪಾಂತರಿ ಕೊರೋನಾ ವೈರಸ್

ಬೆಂಗಳೂರಿನಲ್ಲಿ ಶುಕ್ರವಾರ 464 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಜನವರಿ 1ರಂದು 1,084 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,97,200ಕ್ಕೆ ಏರಿಕೆಯಾಗಿದೆ. ಇನ್ನು 11,058 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 189 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.