ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಉಪ ಚುನಾವಣೆ ಎದುರಿಸುತ್ತಿರುವ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 88 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು (ನ.29): ಉಪ ಚುನಾವಣೆಯಲ್ಲಿ ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಉಪ ಚುನಾವಣೆ ಎದುರಿಸುತ್ತಿರುವ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 88 ಇನ್ಸ್‌ಪೆಕ್ಟರ್‌ಗಳನ್ನು ಗುರುವಾರ ವರ್ಗಾವಣೆಗೊಳಿಸಿದೆ.
ಯಶವಂತಪುರ, ಮಹಾಲಕ್ಷ್ಮೇಲೇಔಟ್, ಹೊಸಕೋಟೆ ಕೆ.ಆರ್.ಪುರ, ಶಿವಾಜಿನಗರ, ಹಿರೇಕೆರೂರು, ರಾಣೆಬೆನ್ನೂರು, ಹೊಸಪೇಟೆ, ಹುಣಸೂರು, ಚಿಕ್ಕಬಳ್ಳಾಪುರ, ಗೋಕಾಕ್, ಯಲ್ಲಾಪುರ, ಅಥಣಿ, ಕೆ.ಆರ್.ಪೇಟೆ ಹಾಗೂ ಕಾಗವಾಡ ವ್ಯಾಪ್ತಿಯ ಪೊಲೀಸರನ್ನು ಎತ್ತಂಗಡಿ ಮಾಡಲಾಗಿದೆ.
ಕೆಲ ದಿನಗಳ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಪೂರಕವಾಗಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಆರೋಪಿಸಿ ದೂರು ಸಲ್ಲಿಸಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗವು, ಆರೋಪಿತ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಡಿಜಿಪಿ ಅವರಿಗೆ ಸೂಚಿಸಿತ್ತು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್‌ಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ವರ್ಗಾವಣೆಗೊಳಿಸಿದ್ದಾರೆ.
ಡಿಸೆಂಬರ್ 5 ರಂದು ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 9 ರಂದು ಫಲಿತಾಂಶ ಪ್ರಕಟವಾಗಲಿದೆ.
