Asianet Suvarna News Asianet Suvarna News

ವರ್ಗಾವಣೆ ಪರ್ವ: 9 ಜಿಲ್ಲಾಧಿಕಾರಿ ಸೇರಿದಂತೆ ಒಟ್ಟು 42 ಅಧಿಕಾರಿಗಳ ​ಎತ್ತಂಗಡಿ

 9 ಜಿಲ್ಲೆಗಳ ಜಿಲ್ಲಾಧಿಕಾರಿ ಸೇರಿದಂತೆ ರಾಜ್ಯದ ಒಟ್ಟು 42 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ವರ್ಗಾವಣೆ ಪಟ್ಟಿ ಹೀಗಿದೆ.

9 DC including Total 42 officers Transferred By Karnataka Govt rbj
Author
Bengaluru, First Published Feb 13, 2021, 6:38 PM IST

ಬೆಂಗಳೂರು, (ಫೆ.13): ರಾಜ್ಯದ ಐಎಎಸ್ ಅಧಿಕಾರಿಗಳ ಬೃಹತ್ ವರ್ಗಾವಣೆಯಾಗಿದ್ದು, ಒಟ್ಟು 42 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದರಲ್ಲಿ ಒಟ್ಟು 9 ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಅಧಿಕಾರಿಗಳನ್ನು ನೇಮಿಸಲಾಗಿದೆ. ಯಾವ ಜಿಲ್ಲೆಯ ಜಿಲ್ಲಾಧಿಕಾರಿಗಳು ಎಲ್ಲಿಗೆ ಟ್ರಾನ್ಸ್‌ಫರ್ ಆಗಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಜಿಲ್ಲಾಧಿಕಾರಿಗಳ ವರ್ಗಾವಣೆ ಪಟ್ಟಿ ಇಂತಿದೆ
* ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ. ವೆಂಕಟೇಶ್ ಅವರನ್ನು ಜಲಾನಯನ ಅಭಿವೃದ್ಧಿ ನಿಗಮದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಮಂಡ್ಯ ಡಿಸಿಯಾಗಿ ಅಶ್ವತಿ ಎಸ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.

* ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ಬಗಾದಿ ಗೌತಮ್ ಅವರನ್ನು ವಾಣಿಜ್ಯ ತೆರಿಗೆ ವಿಭಾಗದ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇವರ ಜಾಗಕ್ಕೆ ಕೆ.ಎನ್. ರಮೇಶ್ ಅವರನ್ನು ನೇಮಿಸಲಾಗಿದೆ.

* ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಆರ್.ವೆಂಕಟೇಶ್ ಕುಮಾರ್ ಅವರನ್ನು ಕಲಬುರಗಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಜಂಟಿ ಆಯುಕ್ತರನ್ನಾಗಿ ನೇಮಿಸಲಾಗಿದೆ. ಇವರ ಜಾಗಕ್ಕೆ ವೆಂಕಟರಾಜ ಅವರನ್ನು ನೇಮಿಸಲಾಗಿದೆ.

* ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜಿ.ಎನ್. ಶಿವಮೂರ್ತಿ ಅವರನ್ನು ಕಬ್ಬು ಮತ್ತು ಸಕ್ಕರೆ ಅಭಿವೃದ್ಧಿ ನಿಗಮ ಆಯುಕ್ತರನ್ನಾಗಿ ನೇಮಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಜೆ. ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ.

* ತುಮಕೂರು ಡಿಸಿಯಾಗಿದ್ದ ರಾಕೇಶ್ ಕುಮಾರ್ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಇವರ ಜಾಗಕ್ಕೆ ಪಾಟೀಲ್ ಯಲಗೌಡ ಶಿವನಗೌಡ ಅವರನ್ನು ನೇಮಿಸಲಾಗಿದೆ.

* ಮಂಗಳೂರು ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಸೆಲ್ವಮಣಿ ಅವರನ್ನು ಕೋಲಾರ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಇವರ ಜಾಗಕ್ಕೆ ಕುಮಾರ ಅವರನ್ನು ನೇಮಿಸಲಾಗಿದೆ.

* ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಹರೀಶ್ ಕುಮಾರ್ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ, ಮುಲ್ಲಾ ಮುಹಿಲಾನ್ ಅವರನ್ನು ನೇಮಿಸಲಾಗಿದೆ.

* ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ರವಿ.ಎಂ.ಆರ್ ಅವರನ್ನು ಸಕಾಲ ಮಿಶನ್ ನಿರ್ದೇಶಕರನ್ನಾಗಿ ವರ್ಗಾಯಿಸಿ, ಅವರ ಜಾಗಕ್ಕೆ ಬಿ.ಸಿ.ಸತೀಶ್ ಅವರನ್ನು ನೇಮಿಸಲಾಗಿದೆ.

* ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಪಿ.ಎನ್. ರವೀಂದ್ರ ಅವರನ್ನು ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇವರ ಜಾಗಕ್ಕೆ ಕೆ.ಶ್ರೀನಿವಾಸ್ ಅವರನ್ನು ನೇಮಿಸಲಾಗಿದೆ.

* ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಸತ್ಯಭಾಮಾ ಅವರನ್ನು ಕರ್ನಾಟಕ ಸಣ್ಣ ಕೈಗಾರಿಕೆ ಇಲಾಖೆಗೆ ಎಂ.ಡಿ ಯಾಗಿ ನೇಮಿಸಲಾಗಿದೆ. ಇವರ ಜಾಗಕ್ಕೆ ಸೆಲ್ವಮಣಿ ಅವರನ್ನು ನೇಮಿಸಲಾಗಿದೆ.

Follow Us:
Download App:
  • android
  • ios