ಬೆಂಗಳೂರು, (ಮಾ.13): ರಾಜ್ಯದಲ್ಲಿ ಕೆಲ ದಿನಗಳಿಂದ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಇಂದು (ಶನಿವಾರ)  921 ಕೊರೋನಾ ಕೇಸ್ ಪತ್ತೆಯಾಗಿದ್ದು,  ಓರ್ವ ಮೃತಪಟ್ಟಿದ್ದಾರೆ. ಇನ್ನು 992 ಕೊರೋನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಟ್ಟು ರಾಜ್ಯ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ 959338ಕ್ಕೆ ಏರಿಕೆಯಾಗಿದ್ರೆ, ಇದುವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 12,387 ಆಗಿದೆ.

ಕೊರೊನಾ 2 ನೇ ಅಲೆ, ಬೆಂಗಳೂರಿನ 3 ವಲಯಗಳು ಮೋಸ್ಟ್ ಡೇಂಜರಸ್ ಅಂತೆ!

 ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದರ ಒಟ್ಟು ಸಂಖ್ಯೆ 938890ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ. 

ಸದ್ಯ 8042 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 123 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇನ್ನು ಇಲ್ಲಿಯವರೆಗೆ 938890 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾವಾರು ಅಂಕಿ-ಸಂಖ್ಯೆ
ಬಾಗಲಕೋಟೆ 02, ಬಳ್ಳಾರಿ 4, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 630, ಬೀದರ್ 15, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 1, ಚಿತ್ರದುರ್ಗ 4, ದಕ್ಷಿಣ ಕನ್ನಡ 43, ದಾವಣಗೆರೆ 5, ಧಾರವಾಡ 10, ಗದಗ 4, ಹಾಸನ 11, ಕಲಬುರಗಿ 35, ಕೊಡಗು 5, ಕೋಲಾರ 3, ಮಂಡ್ಯ 3, ಮೈಸೂರು 47, ರಾಯಚೂರು 1, ಶಿವಮೊಗ್ಗ 7, ತುಮಕೂರು 38, ಉಡುಪಿ 13, ಉತ್ತರ ಕನ್ನಡ 5, ವಿಜಯಪುರ 8, ಯಾದಗಿರಿಯಲ್ಲಿ 1 ಪ್ರಕರಣ ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.