ಕರ್ನಾಟಕದಲ್ಲಿ ನಿಲ್ಲದ ಕೊರೋನಾ, ಬುಧವಾರ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ
ಕರ್ನಾಟಕದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದ್ದು, ಇಂದು (ಬುಧವಾರ) ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ.
ಬೆಂಗಳೂರು, (ಅ.14): ರಾಜ್ಯದಲ್ಲಿ ಇಂದು (ಬುಧವಾರ) 9265 ಕೊವಿಡ್-19 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, 75 ಜನರು ಸೊಂಕಿನಿಂದ ಮೃತಪಟ್ಟಿದ್ದಾರೆ.
ಇನ್ನು ಕಳೆದ 24 ಗಂಟೆಗಳಲ್ಲಿ 8662 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 611167 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 113987 ಸಕ್ರಿಯ ಪ್ರಕರಣಗಳಿವೆ.
ದಸರಾ ಆಚರಿಸಲು ರಾಜ್ಯ ಸರ್ಕಾರ ಅನುಮತಿ, ಈ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯ
ಕರ್ನಾಟಕದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 735371ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 10198ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಎಷ್ಟು ಮಂದಿಗೆ ಟೆಸ್ಟ್?:
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 39111 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 74660 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 113771 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 62,50,992 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.
ಯಾವ ಜಿಲ್ಲೆಗಳಲ್ಲಿ ಎಷ್ಟು ಕೇಸ್?:
ಬಾಗಲಕೋಟೆ 158, ಬಳ್ಳಾರಿ 275, ಬೆಳಗಾವಿ 297, ಬೆಂಗಳೂರು ಗ್ರಾಮಾಂತರ 344, ಬೆಂಗಳೂರು 4574, ಬೀದರ್ 19, ಚಾಮರಾಜನಗರ 97, ಚಿಕ್ಕಬಳ್ಳಾಪುರ 137, ಚಿಕ್ಕಮಗಳೂರು 97, ಚಿತ್ರದುರ್ಗ 162, ದಕ್ಷಿಣ ಕನ್ನಡ 292, ದಾವಣಗೆರೆ 82, ಧಾರವಾಡ 136, ಗದಗ 41, ಹಾಸನ 227, ಹಾವೇರಿ 66, ಕಲಬುರಗಿ 39, ಕೊಡಗು 160, ಕೋಲಾರ 93, ಕೊಪ್ಪಳ 60, ಮಂಡ್ಯ 212, ಮೈಸೂರು 614, ರಾಯಚೂರು 44, ರಾಮನಗರ 42, ಶಿವಮೊಗ್ಗ 83, ತುಮಕೂರು 341, ಉಡುಪಿ 119, ಉತ್ತರ ಕನ್ನಡ 192, ವಿಜಯಪುರ 128, ಯಾದಗಿರಿ 27 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.