ರಾಜ್ಯದಲ್ಲಿ ಮತ್ತೆ ಶುರುವಾಯ್ತು ಕೊರೋನಾ ಅಬ್ಬರ: ಮಾ.14ರ ಅಂಕಿ-ಸಂಖ್ಯೆ ನೋಡಿ
ಕರ್ನಾಟಕದಲ್ಲಿ ಕೊರೋನಾ ಎರಡನೇ ಭೀತಿ ಶುರುವಾಗಿದೆ. ದಿನ ಕಳೆದಂತೆ ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರು, (ಮಾ.14): ಒಂದು ವರ್ಷ ಇಡೀ ಮಾನವ ಸಂಕುಲನವನ್ನು ಕಟ್ಟಿ ಕಾಡಿದ್ದ ಕೊರೋನಾ ಮಹಾಮಾರಿ, ಇದೀಗ ತನ್ನ ಎರಡನೇ ಪಾಳೆ ಶುರು ಮಾಡಿಕೊಂಡಿದೆ.
ಹೌದು...ಕಳೆದ ಹಲವು ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿತ್ತು. ಆದ್ರೆ, ಇದೀಗ ಮಾರ್ಚ್ ಪ್ರಾರಂಭವಾಗಿನಿಂದ ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.
ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಮಹತ್ವದ ಸಭೆ ಕರೆದ ಸಿಎಂ
ರಾಜ್ಯದಲ್ಲಿ ಇಂದು (ಭಾನುವಾರ) 934 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 609 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,60,272ಕ್ಕೆ ಏರಿಕೆಯಾದರೆ, ಒಂದು ದಿನದಲ್ಲಿ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,390.
609 ಮಂದಿ ಡಿಸ್ಚಾರ್ಜ್ ಆಗಿದ್ದರಿಂದ ರಾಜ್ಯದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 9,39,499ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 8,354 ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು (ಭಾನುವಾರ) 628 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 371 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6107ಕ್ಕೆ ಏರಿಕೆಯಾಗಿದೆ.