Corona Crisis: 27 ಜಿಲ್ಲೆಗಳಲ್ಲಿ ಹೊಸ ಕೋವಿಡ್ ಕೇಸ್ ಪತ್ತೆ: 944 ಜನರಿಗೆ ಸೋಂಕು
ರಾಜ್ಯದಲ್ಲಿ ಕೊರೋನಾ ಸೋಂಕು ಹೊಸ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಪ್ರಕರಣಗಳು ಮತ್ತೆ ಒಂದು ಸಾವಿರಕ್ಕಿಂತ ಕೆಳಗಿಳಿದಿವೆ. ಆದರೆ, ರಾಜ್ಯ 27 ಜಿಲ್ಲೆಗಳಲ್ಲಿಯೂ ಹೊಸ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು (ಜು.18): ರಾಜ್ಯದಲ್ಲಿ ಕೊರೋನಾ ಸೋಂಕು ಹೊಸ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಪ್ರಕರಣಗಳು ಮತ್ತೆ ಒಂದು ಸಾವಿರಕ್ಕಿಂತ ಕೆಳಗಿಳಿದಿವೆ. ಆದರೆ, ರಾಜ್ಯ 27 ಜಿಲ್ಲೆಗಳಲ್ಲಿಯೂ ಹೊಸ ಪ್ರಕರಣಗಳು ವರದಿಯಾಗಿವೆ. ಭಾನುವಾರ 944 ಕೊರೋನಾ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 670 ಮಂದಿ ಗುಣಮುಖರಾಗಿದ್ದಾರೆ. ಧಾರವಾಡದಲ್ಲಿ 45 ವರ್ಷದ ಪುರುಷ ಸಾವಿಗೀಡಾಗಿದ್ದಾರೆ. ಸದ್ಯ 7,569 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. 29 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.3.25ರಷ್ಟುದಾಖಲಾಗಿದೆ.
ಶನಿವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಒಂದು ಸಾವಿರ ಹೆಚ್ಚಳವಾಗಿವೆ. ಆದರೂ, ಹೊಸ ಪ್ರಕರಣಗಳು 430 ಇಳಿಕೆಯಾಗಿವೆ (ಶನಿವಾರ 1374 ಕೇಸ್, ಸಾವು ಮೂರು). ಕಳೆದ ಒಂದು ವಾರದಿಂದ ಸೋಂಕು ಪ್ರಕರಣಗಳು 1000-900 ನಡುವೆ ಏರಿಳಿತವಾಗುತ್ತಿವೆ. ಶನಿವಾರ ಮೂರಕ್ಕೆ ಹೆಚ್ಚಳವಾಗಿದ್ದ ಸಾವಿನ ಸಂಖ್ಯೆ ತಗ್ಗಿದ್ದೆ. ಸದ್ಯ ಸಕ್ರಿಯ ಸೋಂಕಿತರ ಪೈಕಿ 94 ಮಂದಿ ಆಸ್ಪತ್ರೆಯಲ್ಲಿದ್ದು, 7463 ಮಂದಿ ಮನೆಯಲ್ಲಿಯೇ ಆರೈಕೆ ಪಡೆಯುತ್ತಿದ್ದಾರೆ.
Corona Crisis: ಒಂದೇ ದಿನ ಕೋವಿಡ್‌ಗೆ 3 ಬಲಿ: 4 ತಿಂಗಳಲ್ಲೇ ಮೊದಲು
ಎಲ್ಲಿ, ಎಷ್ಟು ಮಂದಿಗೆ ಸೋಂಕು?: ಜುಲೈ ಆರಂಭದಲ್ಲಿ ಬೆಂಗಳೂರಿಗೆ ಸೀಮಿತವಾಗಿದ್ದ ಕೊರೊನಾ ಸೋಂಕಿನ ತೀವ್ರತೆ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಹೆಚ್ಚುತ್ತಿದೆ. ಸದ್ಯ ಗದಗ, ಕೊಡಗು ಹಾಗೂ ಯಾದಗಿರಿ ಹೊರತುಪಡಿಸಿ ರಾಜ್ಯದ 27 ಜಿಲ್ಲೆಗಳಲ್ಲಿಯೂ ಹೊಸ ಪ್ರಕರಣಗಳು ವರದಿಯಾಗಿವೆ. ಭಾನುವಾರ ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 799 ಪತ್ತೆಯಾಗಿವೆ. ಉಳಿದಂತೆ ಧಾರವಾಡ 17, ದಕ್ಷಿಣ ಕನ್ನಡ 16, ಉತ್ತರಕನ್ನಡ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಲಾ 11 ಮಂದಿಗೆ ಸೋಂಕು ತಗುಲಿದೆ. ಉಳಿದಂತೆ 22 ಜಿಲ್ಲೆಗಳಲ್ಲಿ ಬೆರಳೆಣಿಕೆಯಷ್ಟುಪತ್ತೆಯಾಗಿವೆ.
ದ.ಕ.:16, ಉಡುಪಿಯಲ್ಲಿ 8 ಮಂದಿಗೆ ಸೋಂಕು: ದ.ಕ. ಜಿಲ್ಲೆಯಲ್ಲಿ ಭಾನುವಾರ 16 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 8 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 61ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಇದುವರೆಗೆ 1,36,033 ಮಂದಿ ಸೋಂಕಿತರಾಗಿದ್ದು, ಅವರಲ್ಲಿ 1,34,119 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1852 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಬುಲೆಟಿನ್ ತಿಳಿಸಿದೆ.
ಉಡುಪಿ ಜಿಲ್ಲೆಯಲ್ಲಿ ಶನಿವಾರ 240 ಮಂದಿಯ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ ಉಡುಪಿ ತಾಲೂಕಿನ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ದಿನ ಒಬ್ಬರು ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 32 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 539 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಕೊರೋನಾ ಏರಿಳಿತ: ನಗರದಲ್ಲಿ ಭಾನುವಾರ 799 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.5.45 ರಷ್ಟಿದೆ. 625 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರದಿಯಾಗಿಲ್ಲ. ನಗರದಲ್ಲಿ ಸದ್ಯ 6878 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 26 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 4 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 27 508ಮಂದಿ ಕೋವಿಡ್ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ.
Free Booster Dose: ಇಂದಿನಿಂದ ರಾಜ್ಯದಲ್ಲಿ ಉಚಿತ 3ನೇ ಡೋಸ್ ಕೋವಿಡ್ ಲಸಿಕೆ
2592 ಮಂದಿ ಮೊದಲ ಡೋಸ್, 5796 ಮಂದಿ ಎರಡನೇ ಡೋಸ್ ಮತ್ತು 19120 ಮಂದಿ ಮೂರನೇ ಡೋಸ್ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 17,128 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 13628 ಆರ್‌ಟಿಪಿಸಿಆರ್ ಹಾಗೂ 3433 ಮಂದಿಗೆ ರಾರಯಪಿಡ್ ಆ್ಯಂಟಿಜನ್ ಪರೀಕ್ಷೆ ನಡೆಸಲಾಗಿದೆ. ಭಾನುವಾರ ನಗರದ ಹೊಸದಾಗಿ ಕಂಟೈನ್ಮೆಂಟ್ ಪ್ರದೇಶ ಸೃಷ್ಟಿಯಾಗಿಲ್ಲ. ನಗರದಲ್ಲಿ ಒಟ್ಟು 16 ಸಕ್ರಿಯ ಕಂಟೈನ್ಮೆಂಟ್ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.