ಕರ್ನಾಟಕದಲ್ಲಿ ಕೊರೋನಾ: ಈ ವರ್ಷದ ಕೊನೆ ದಿನದ ಸೋಂಕಿನ ಅಂಕಿ-ಸಂಖ್ಯೆ ಇಲ್ಲಿದೆ
ಹೊಸ ರೂಪಾಂತರ ವೈರಸ್ ಭೀತಿ ಮಧ್ಯೆ ಕೊರೋನಾ ಸೋಂಕಿನ ಪ್ರಮಾಣದಲ್ಲಿ ದಿನದಿಂದ ದಿನಕ್ಕೆ ಇಳಿಕೆಯತ್ತ ಸಾಗುತ್ತಿದೆ. ಹಾಗಾದ್ರೆ ಈ ವರ್ಷದ ಕೊನೆ ದಿನದ ಅಂಕಿ-ಸಂಖ್ಯೆ ಎಷ್ಟು ಎನ್ನುವ ಮಾಹಿತಿ ಇಂತಿದೆ.
ಬೆಂಗಳೂರು, (ಡಿ.31): ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಗುರುವಾರ 952 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,19,496ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 9 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,090ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು (ಗುರುವಾರ) 1282 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,96,116ಕ್ಕೆ ಏರಿಕೆಯಾಗಿದೆ. ಇನ್ನು 11,271 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 194 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೋನಾ 2ನೇ ಅಲೆ ಹಬ್ಬುವ ಸಾಧ್ಯತೆ ಹೆಚ್ಚು: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಿವೃತ್ತ ವೈರಾಣು ತಜ್ಞ
ಇನ್ನು ಬೆಂಗಳೂರಿನಲ್ಲಿ 554 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ನಗರದಲ್ಲಿ ಸೋಂಕಿನಿಂದ ಆರು ಮಂದಿ ಮೃತಪಟ್ಟಿದ್ದಾರೆ