ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಲ್ಲಿ ಲಾಕ್‌ಡೌನ್ ಭೀತಿ ಶುರುವಾಗಿದೆ. ಇನ್ನು ಸೋಮವಾರ ಎಷ್ಟು ಪ್ರಕರಣಗಳು? ಎಷ್ಟು ಸಾವು ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರು, (ಏ.12): ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು (ಸೋಮವಾರ) ಬರೋಬ್ಬರಿ 9,579 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಒಂದೇ ದಿನ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 52 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,941ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಸರ್ವ ಪಕ್ಷಗಳ ಸಭೆ ಕರೆದ ಸಿಎಂ, ಲಾಕ್‌ಡೌನ್ ಆಗುತ್ತಾ?

ಬೆಂಗಳೂರಿನಲ್ಲಿ ಸೋಮವಾರ 6,387 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,88,369ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 40 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 2,767 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,85,924ಕ್ಕೆ ಏರಿಕೆಯಾಗಿದೆ. ಇನ್ನು 75,985 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 470 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.