ಬೆಂಗಳೂರು, (ಜ.08):  ಬೆಂಗಳೂರಿನಲ್ಲಿ ಇಂದು (ಶುಕ್ರವಾರ) 479 ಸೇರಿದಂತೆ ರಾಜ್ಯದಲ್ಲಿ ಒಟ್ಟು 970 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9,25,868ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 657 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,04,286ಕ್ಕೇರಿದ್ದು,  ಸದ್ಯ 9,429 ಸಕ್ರೀಯ ಪ್ರಕರಣಗಳಿವೆ.

ನಿಮ್ಗೆ ಕೊರೋನಾ ಲಸಿಕೆ ಬೇಕಾ? ಇದಕ್ಕೆ ಏನ್ಮಾಡ್ಬೇಕು? ಇಲ್ಲಿದೆ ಸಂಪೂರ್ಣ ಡಿಟೇಲ್ಸ್..!

ಇನ್ನು ರಾಜ್ಯದಲ್ಲಿ ಗುರುವಾರ ಸೋಂಕಿಗೆ 3 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,134ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

ಬೆಂಗಳೂರಿನಲ್ಲಿ 479 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,91,663ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.