ಕರ್ನಾಟಕದಲ್ಲಿ ನಿಲ್ಲದ ಕೊರೋನಾ ರಣಕೇಕೆ: ಇಲ್ಲಿದೆ ಭಾನುವಾರದ ಅಂಕಿ-ಸಂಖ್ಯೆ
ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಪತ್ತೆಯಾದ ಕೊರೋನಾ ಕೇಸ್ ಎಷ್ಟು..? ಎಷ್ಟು ಸಾವು..? ಎನ್ನುವ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಸೆ.13): ರಾಜ್ಯದಲ್ಲಿ ಇಂದು (ಭಾನುವಾರ) 9,894 ಹೊಸ ಕೊರೋನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, 104 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. 8402 ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇನ್ನು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,59,445ಕ್ಕೇರಿದ್ರೆ, ಸಾವಿನ ಸಂಖ್ಯೆ 7,265ಕ್ಕೆ ಏರಿಕೆಯಾಗಿದೆ. ಇದುವರೆಗೆ 3,52,958 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
BSY ಕೆಳಗಿಳಿಸಲು ಲಾಭಿ, ರಿಯಲ್ ಹೀರೋಸ್‌ಗೆ ನಮಿಸಿದ ಆರ್‌ಸಿಬಿ; ಸೆ.13ರ ಟಾಪ್ 10 ಸುದ್ದಿ!
ಈ ಮೂಲಕ ಪ್ರಸ್ತುತ ರಾಜ್ಯದಲ್ಲಿ 99,203 ಸಕ್ರೀಯ ಸೋಂಕಿತರಿದ್ದಾರೆ. ಈ ಪೈಕಿ 607 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 3,479 ಜನರಿಗೆ ಹೊಸದಾಗಿ ಕೊರೋನಾ ಕೇಸ್ ಪತ್ತೆಯಾಗಿದ್ದು, 45 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.