ಬೆಂಗಳೂರು, (ಡಿ.07): ರಾಜ್ಯದಲ್ಲಿ ಇಂದು (ಸೋಮವಾರ) ಹೊಸದಾಗಿ ಕೇವಲ 998 ಕೊರೋನಾ ಪಾಸಿಟಿವ್ ಪ್ರಕರಳುಗಳು ದೃಢಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8,94,004ಕ್ಕೆ ಏರಿಕೆಯಾಗಿದೆ.
  
ಇವತ್ತು ಒಂದೇ ದಿನ 11 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ರಾಜ್ಯದಲ್ಲಿ 11,867 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 8,57,351 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 24,767 ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.

ಕೊರೋನಾ ಲಸಿಕೆಗೆ ಕಾಯುತ್ತಿರುವವರಿಗೆ ಬಿಗ್ ಶಾಕ್ ನೀಡಿದ WHO! 

ಇನ್ನೂ ಕಳೆದ 24 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 501 ಜನರಿಗೆ ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,74,525 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇವತ್ತು 7 ಜನ ಸೋಂಕಿತರು ಬಲಿಯಾಗಿದ್ದು, ಇದುವರೆಗೆ 4190 ಜನ ಮೃತಪಟ್ಟಿದ್ದಾರೆ. 

3,51,065 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಂತ ಮತ್ತು 19,269 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದಿನ (ಸೋಮವಾರ) ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.