ಮಂಗಳವಾರ ಕರ್ನಾಟಕದಲ್ಲಿ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದಿನ (ಮಂಗಳವಾರ) ರಾಜ್ಯದಲ್ಲಿ ಕೊರೋನಾ ಅಂಕಿ-ಸಂಖ್ಯೆ ಈ ಕೆಳಗಿನಂತಿದೆ.

9993 new Covid19 Cases and 10228 recovery In Karnataka On Oct 6th rbj

ಬೆಂಗಳೂರು. (ಅ.06): ರಾಜ್ಯದಲ್ಲಿ ಇಂದು (ಮಂಗಳವಾರ) ಹೊಸದಾಗಿ 9,993 ಜನರಿಗೆ ಕೊರೋನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ.
ಈ ಮೂಲಕ ಸೋಂಕಿತರ ಸಂಖ್ಯೆ 6,57,705ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದಲ್ಲಿ 5,012 ಜನರು ಸೇರಿದಂತೆ ಒಟ್ಟು 9,993 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 6,57,705ಕ್ಕೆ ಏರಿಕೆಯಾಗಿದೆ.

ಹೆಚ್ಚಾಗುತ್ತಿದೆ ಕೋವಿಡ್ ಸೋಂಕು; ಅಸ್ತಮಾ ಇರುವವರೇ ಇರಲಿ ಆರೋಗ್ಯದ ಬಗ್ಗೆ ನಿಗಾ

ಕಳೆದ 24 ಗಂಟೆಗಳಲ್ಲಿ 10,228 ಜನರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಇದುವರೆಗೆ 5,33,074 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾದಂತಾಗಿದೆ.

ಪ್ರಸ್ತು ರಾಜ್ಯದಲ್ಲಿ 1,15,151 ಸಕ್ರೀಯ ಸೋಂಕಿತರಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಮಂಗಳವಾರ 91 ಜನರು ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 9,461ಕ್ಕೇರಿದೆ.

ಜಿಲ್ಲಾವಾರು ಕೊರೋನಾ ಕೇಸ್
9993 new Covid19 Cases and 10228 recovery In Karnataka On Oct 6th rbj

Latest Videos
Follow Us:
Download App:
  • android
  • ios