ಅಬ್ಬಬ್ಬಾ 5 ಸಾವಿರ ಕಿಮೀ ಸೈಕಲ್ ತುಳಿದು ದಾಖಲೆ ಮಾಡಿದ 63ರ ವೃದ್ಧ!
ನಗರದ 63ರ ಹಿರಿಯ ಗುರುಮೂರ್ತಿ ಮಾತರಂಗಿಮಠ ಅವರು ಮೂರು 5 ಸಾವಿರ ಕಿಮೀ ಸೈಕಲ್ ತುಳಿಯುವ ಮೂಲಕ ಏಷ್ಯಾ ಬುಕ್ ಆಫ್ ರೆಕಾರ್ಡ್ ತಮ್ಮ ಹೆಸರನ್ನು ದಾಖಲಿಸಿದ್ದಾರೆ.
ಹುಬ್ಬಳ್ಳಿ (ನ.20) : ನಗರದ 63ರ ಹಿರಿಯ ಗುರುಮೂರ್ತಿ ಮಾತರಂಗಿಮಠ ಅವರು ಮೂರು 5 ಸಾವಿರ ಕಿಮೀ ಸೈಕಲ್ ತುಳಿಯುವ ಮೂಲಕ ಏಷ್ಯಾ ಬುಕ್ ಆಫ್ ರೆಕಾರ್ಡ್ ತಮ್ಮ ಹೆಸರನ್ನು ದಾಖಲಿಸಿದ್ದಾರೆ.
ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ಇವರು ತಮ್ಮ 60 ನೇ ವಯಸ್ಸಿನಲ್ಲಿ ಸೈಕ್ಲಿಂಗ್ ಪ್ರಾರಂಭಿಸಿ, ಈ ವರ್ಷ 50 ಸಾವಿರ ಕಿಮೀ ಸೈಕಲ್‌ನಲ್ಲಿ ಕ್ರಮಿಸಿ ಸಾಧನೆ ಬರೆದಿದ್ದಾರೆ. ಸತತ ಮೂರು ದಿನಗಳ ಕಾಲ ನಿತ್ಯ 50 ಕಿಮೀ ಕ್ರಮಿಸಿದ ದಾಖಲೆಯೂ ಇವರದಾಗಿದೆ.
ಹುಬ್ಬಳ್ಳಿಯಲ್ಲಿ ಡ್ಯುಯಥ್ಲಾನ್ -2020 ರಲ್ಲಿ 10 ಕಿಮೀ ಓಡಿದರು ಮತ್ತು 40 ಕಿಲೋಮೀಟರ್ ಸೈಕ್ಲಿಂಗ್ ಮಾಡಿರುವುದು ಗಮನೀಯ.
ವಿಶ್ವದ ಅತ್ಯಂತ ದುಬಾರಿ ವಿಸ್ಕಿ ಬಾಟಲ್, ಬರೋಬ್ಬರಿ 22.7 ಕೋಟಿ ರೂಗೆ ಮಾರಾಟ!
22 ರಂದು ಕನಕದಾಸ ಜಯಂತಿ ಪೂರ್ವಭಾವಿ ಸಭೆ:
ಹುಬ್ಬಳ್ಳಿ: ತಾಲೂಕು ಆಡಳಿತದಿಂದ ನ. 30 ರಂದು ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ನ. 22 ರಂದು ಬೆಳಗ್ಗೆ 11.30 ಗಂಟೆಗೆ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಜಯಂತಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ. ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಹುಬ್ಬಳ್ಳಿ ಶಹರ ತಹಸೀಲ್ದಾರ್ ಕಲಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.