ಕರ್ನಾಟಕದಲ್ಲಿ ಮೊದಲ ಕೊರೋನಾ ಕೇಸ್ ಪತ್ತೆ: ಎಚ್ಚರವಾಗಿರಿ..!
ಕರ್ನಾಟಕದಲ್ಲಿ ಮೊದಲ ಕೊರೋನಾ ಕೇಸ್ ಪತ್ತೆಯಾಗಿದೆ. ಈ ಬಗ್ಗೆ ರಾಜ್ಯ ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ಖಚಿತಪಡಿಸಿದ್ದಾರೆ. ಯಾರು? ಎಲ್ಲಿ?
ಬೆಂಗಳೂರು, [ಮಾ.09]: ಇಷ್ಟು ದಿನ ಬೇರೆ ರಾಷ್ಟ್ರ, ಬೇರೆ ರಾಜ್ಯಗಳಲ್ಲಿ ಪ್ರತ್ಯಕ್ಷ್ಯವಾಗಿದ್ದ ಡೆಡ್ಲಿ ಕೊರೋನಾ ವೈರಸ್ ಕರ್ನಾಟಕಕ್ಕೂ ಎಂಟ್ರಿ ಕೊಟ್ಟಿದೆ. ಇತ್ತೀಚೆಗಷ್ಟೇ ಅಮೆರಿಕಕ್ಕೆ ಹೋಗಿ ಬಂದಿದ್ದ ಬೆಂಗಳೂರು ಮೂಲದ ವ್ಯಕ್ತಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ವ್ಯಕ್ತಿ, ಕುಟುಂಬ ಸಮೇತರಾಗಿ ಮಾರ್ಚ್ 1ರಂದು ಬೆಂಗಳೂರಿಗೆ ಬಂದಿದ್ದರು. ಸದ್ಯ ಆ ವ್ಯಕ್ತಿಯನ್ನ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ಕೊಡಿಸಲಾಗ್ತಿದೆ.
Breaking: ಕೊರೋನಾ ಭೀತಿ, ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಇನ್ನು ಆತನ ಜತೆಗೆ ಬಂದಿದ್ದ ಪತ್ನಿ ಮತ್ತು ಅವರ ಮಗಳನ್ನ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗೊಳಪಡಿಸಲಾಗಿದೆ. ಅಷ್ಟೇ ಅಲ್ಲದೇ ಸಾಫ್ಟ್‌ವೇರ್ ಇಂಜಿನಿಯರ್ ಜೊತೆ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನ ಸಹ ಪರೀಕ್ಷೆ ಒಳಪಡಿಸಲಾಗಿದೆ. ಈ ಬಗ್ಗೆ ವೈದ್ಯಕೀಯ ಸಚಿವ ಶಿಕ್ಷಣ ಸಚಿವ ಡಾ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲ್ಪಟ್ಟವರು 700 ಜನರ ಪೈಕಿ ಒಬ್ಬರಿಗೆ ಕೊರೋನಾ ಇರುವುದು ದೃಡಪಟ್ಟಿದೆ ಎಂದು ಸ್ಪಷ್ಟಪಡಿಸಿದರು.
ಇಲ್ಲಿಯತನಕ 982 ಜನರನ್ನ ನಿಗಾ ಇಡಲಾಗಿದೆ. ಇವತ್ತು 92 ಜನರ ಮೇಲೆ ನಿಗಾ ಇಟ್ಟಿದ್ದು, 28 ದಿನ ನಿಗಾ ಇಡಲಾಗಿದ್ದವರಲ್ಲಿ 8 ಜನರನ್ನ ಮನೆಗೆ ಕಳುಹಿಸಲಾಗಿದೆ ಎಂದು ಹೇಳಿದರು.
News In 100 Seconds: ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"