Asianet Suvarna News Asianet Suvarna News

ಬಿಸಿಯೂಟದ ಸಾಂಬಾರ್‌ನಲ್ಲಿ ಬಿದ್ದು ಗಾಯಗೊಂಡಿದ್ದ ಮಗು ಸಾವು!

ಜಿಲ್ಲೆಯ ಅಫಜಲ್ಪುರ ತಾಲೂಕಿನ ಚಿಣಮಗೇರಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ ಸಾಂಬಾರ್‌ನಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ 2ನೇ ತರಗತಿ ವಿದ್ಯಾರ್ಥಿನಿ ಮಹಾಂತಮ್ಮ (8) ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

A child who was injured after falling into a hot sambar died at kalaburagi rav
Author
First Published Nov 20, 2023, 7:39 AM IST

ಕಲಬುರಗಿ (ನ.20): ಜಿಲ್ಲೆಯ ಅಫಜಲ್ಪುರ ತಾಲೂಕಿನ ಚಿಣಮಗೇರಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ ಸಾಂಬಾರ್‌ನಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ 2ನೇ ತರಗತಿ ವಿದ್ಯಾರ್ಥಿನಿ ಮಹಾಂತಮ್ಮ (8) ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ನ.16ರಂದು ಬಿಸಿಯೂಟದ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಶೇ.50ರಷ್ಟು ಅಧಿಕ ಸುಟ್ಟಗಾಯ ಅನುಭವಿಸಿದ್ದ ಮಹಾಂತಮ್ಮಳನ್ನು ಕಲಬುರಗಿ ನಗರದ ಜಿಮ್ಸ್‌, ಬಸವೇಶ್ವರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ನಂತರ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು. ಆದರೂ ಸುಟ್ಟಗಾಯಗಳ ತೀವ್ರತೆಯಿಂದ ಚಿಕಿತ್ಸೆಗೂ ಸ್ಪಂದಸದೆ ಭಾನುವಾರ ಕೊನೆಯುಸಿರುಳೆದಿದ್ದಾಳೆ.

ಏರ್‌ ಇಂಡಿಯಾದಲ್ಲಿ ಮತ್ತೆ ಎಡವಟ್ಟು, ಇಡ್ಲಿ-ಸಾಂಬಾರ್ ಜೊತೆ ಸಿಕ್ಕಿದ್ದೇನು ನೋಡಿ!

ಮಗಳ ಸಾವಿಗೆ ಶಾಲೆಯ ಶಿಕ್ಷಕರು, ಅಡುಗೆಯವರ ಕರ್ತವ್ಯ ಲೋಪವೇ ಕಾರಣ ಎಂದು ಆರೋಪಿಸಿ ಬಾಲಕಿ ಮಹಾಂತಮ್ಮಳ ತಾಯಿ ಸಂಗೀತಾ ಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನು, ಘಟನೆ ಹಿನ್ನೆಲೆಯಲ್ಲಿ ಈಗಾಗಲೇ ಮುಖ್ಯ ಶಿಕ್ಷಕ, ಸಹ ಶಿಕ್ಷಕ ಹಾಗೂ ಅಡುಗೆ ಮುಖಸ್ಥರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶಿಸಿದೆ.

ಪ್ರಿಯಾಂಕ್‌ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಗ ಮಣಿಕಂಠ ಮೇಲೆ ಹಲ್ಲೆ

Follow Us:
Download App:
  • android
  • ios