* ಮೈಸೂರಿನಿಂದ ಅತ್ಯಂತ ಆಘಾತಕಾರಿ ಸುದ್ದಿಯೊಂದು ಬಂದಿದೆ. * ಖ್ಯಾತ ಛಾಯಾಗ್ರಾಹಕ ನೇತ್ರರಾಜು ವಿಧಿವಶ* ಇವರ ಛಾಯಾಚಿತ್ರಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮನ್ನಣೆ ಪಡೆದುಕೊಂಡಿವೆ.

ಮೈಸೂರು, (ಮೇ.21): ಪತ್ರಿಕಾರಂಗದಲ್ಲಿ ನೇತ್ರ ಎಂದೇ ಹೆಸರುವಾಸಿಯಾಗಿದ್ದ ಖ್ಯಾತ ಛಾಯಾಗ್ರಾಹಕ ನೇತ್ರರಾಜು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರನ್ನ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆಗೆ ಸ್ಪಂದಿಸದೇ ಇಂದು (ಶುಕ್ರವಾರ) ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದ ಮಾಜಿ ಸ್ಪೀಕರ್ ನಿಧನ

 ಹಲವು ಪತ್ರಿಕೆಗಳಲ್ಲಿ ಇವರು ಕೆಲಸ ನಿರ್ವಹಿಸಿದ್ದರು. ಇವರ ಛಾಯಾಚಿತ್ರಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮನ್ನಣೆ ಪಡೆದುಕೊಂಡಿವೆ. ನಾಗೇಂದ್ರ ಕುಮಾರ್ ಜೈನ್ ಇವರ ಹೆಸರಾಗಿದ್ದು, ನೇತ್ರರಾಜು ಎಂದೇ ಕರೆಯಲಾಗುತ್ತಿತ್ತು.

2019ರ ದಸರಾ ಸಮಯದಲ್ಲಿ ತಾಯಿ ಮತ್ತು ಮಗು ಬೆಳಕಿನಿಂದ ಕಂಗೊಳಿಸುತ್ತಿರುವ ಅರಮನೆಯ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದ ದೃಶ್ಯವನ್ನು ಕ್ಲಿಕ್ಕಿಸಿದ್ದರು. ಈ ಚಿತ್ರ ಅಪಾರ ಮೆಚ್ಚುಗೆ ಗಳಿಸಿತ್ತಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿತ್ತು.