ಕಲ್ಯಾಣ ಕರ್ನಾಟಕಕ್ಕೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ; ಪ್ರತ್ಯೇಕ ಸಚಿವಾಲಯ, ಕಲಬುರಗಿಯಲ್ಲಿ ನಿಮ್ಹಾನ್ಸ್!

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿ.ಟಿ.ರವಿ ಅವರ ಹೇಳಿಕೆಯನ್ನು ಅನಾಗರಿಕ ಮತ್ತು ಕ್ರಿಮಿನಲ್ ಅಪರಾಧ ಎಂದು ಅವರು ಖಂಡಿಸಿದ್ದಾರೆ. ಕಲಬುರಗಿ ಮತ್ತು ಮೈಸೂರಿನಲ್ಲಿ ನಿಮ್ಹಾನ್ಸ್ ಶಾಖೆಗಳನ್ನು ತೆರೆಯುವುದಾಗಿಯೂ ಘೋಷಿಸಿದ್ದಾರೆ.

A separate ministry needed for kalyana karnataka says cm siddaramaiah rav

ಕಲಬುರಗಿ (ಡಿ.23): ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು.

ಅವಾಚ್ಯ ಶಬ್ದ ಬಳಸಿದ್ದಕ್ಕೆ ನಮ್ಮ ಬಳಿ ಸಾಕ್ಷ್ಯ ಇದೆ, ಸರ್ಕಾರ ತನಿಖೆ ನಡೆಸುತ್ತೆ, ಬೇರೆ ತನಿಖೆ ಏಕೆ? : ಸಿಎಂ ಸಿದ್ದರಾಮಯ್ಯ

ಸಿ.ಟಿ.ರವಿ ಮಾತು ಕ್ರಿಮಿನಲ್ ಅಪರಾಧ:

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಸಿ.ಟಿ.ರವಿ ಆ ಪದ ಬಳಸಿರುವುದನ್ನು ಇತರೆ ವಿಧಾನ ಪರಿಷತ್ ಸದಸ್ಯರು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆಂದರು.

ಕಲಬುರಗಿ, ಮೈಸೂರಲ್ಲಿ ಶೀಘ್ರ ನಿಮ್ಹಾನ್ಸ್: ಸಿಎಂ

ಕಲಬುರಗಿ: ಶೀಘ್ರವೇ ಕಲಬುರಗಿ ಹಾಗೂ ಮೈಸೂರಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯ ಶಾಖೆಗಳನ್ನು ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಲ್ಲದೆ, ಕಲಬುರಗಿಯಲ್ಲಿ ಮಧುಮೇಹ ಅಧ್ಯಯನ ಕೇಂದ್ರದ ಪ್ರತ್ಯೇಕ ಘಟಕ ಸ್ಥಾಪನೆಗೂ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಸಂಚಿನಲ್ಲಿ ಸಿಎಂ ಸಿದ್ದರಾಮಯ್ಯ ಕೈವಾಡ..; ಸಿಟಿ ರವಿ ಸ್ಫೋಟಕ ಹೇಳಿಕೆ!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಮಧುಮೇಹ ಅಧ್ಯಯನ ಕೇಂದ್ರ ಸ್ಥಾಪಿಸುವಂತೆ ಸಿಎಂಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ, ಕಲಬುರಗಿಯಲ್ಲಿ ನಿಮ್ಹಾನ್ಸ್ ಘಟಕ ಸ್ಥಾಪಿಸುವ ಭರವಸೆ ನೀಡಿದರು. ಅಲ್ಲದೆ, ವೇದಿಕೆಯಲ್ಲಿದ್ದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್‌ ಅವರತ್ತ ನೋಡಿ, ಮೈಸೂರಿಗೂ ನಿಮ್ಹಾನ್ಸ್ ಅಗತ್ಯವಿದೆ. ಮೈಸೂರನ್ನು ಮರಿಯಬೇಡ ಎಂದರು.

Latest Videos
Follow Us:
Download App:
  • android
  • ios