Asianet Suvarna News Asianet Suvarna News

ಬರ ಹಿನ್ನೆಲೆ ಈ ಬಾರಿ ಸರಳ ದಸರಾ ಆಚರಣೆ: ಸಚಿವ ಮಹದೇವಪ್ಪ

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಈ ಬಾರಿ ವಿಶ್ವವಿಖ್ಯಾತ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸುವುದಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ. 

A simple Dasara celebration this time due to drought Says Minister HC Mahadevappa gvd
Author
First Published Sep 22, 2023, 6:43 AM IST

ಮೈಸೂರು (ಸೆ.22): ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಈ ಬಾರಿ ವಿಶ್ವವಿಖ್ಯಾತ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸುವುದಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಆದ್ದರಿಂದ ರಾಜ್ಯ ಸರ್ಕಾರ ಸರಳ ಹಾಗೂ ಅರ್ಥಪೂರ್ಣ ದಸರೆ ಆಚರಣೆಗೆ ನಿರ್ಧರಿಸಿದ ಎಂದು ಅವರು ಹೇಳಿದ್ದಾರೆ.

ಸಾಂಪ್ರದಾಯಿಕವಾಗಿ ಆಚರಿಸಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಅದ್ದೂರಿ, ಸರಳ ಎಂಬ ಗೊಂದಲವಿಲ್ಲದೇ ಸಾಂಪ್ರದಾಯಿಕವಾಗಿ ಆಚರಿಸುವಂತೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ ಆಗ್ರಹಿಸಿದ್ದಾರೆ. ಮೊದಲು ಈ ಬಾರಿ ದಸರೆಯನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪಹೇಳಿದರು. ಇತ್ತೀಚೆಗೆ ಬರದ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸುವುದಾಗಿ ಹೇಳಿದ್ದಾರೆ. 

ಬಿಜೆಪಿಗೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಹಿಳಾ ಮೀಸಲಾತಿ ನೆನಪಾಗಿದೆ: ಮಹದೇವಪ್ಪ

ಇದರಿಂದ ದಸರೆಯ ಸಂದರ್ಭದಲ್ಲಿ ಹೊರ ರಾಜ್ಯ ಹಾಗೂ ವಿದೇಶಗಳಿಂದ ಬರುವವರಿಗೆ ಗೊಂದಲ ಉಂಟಾಗುತ್ತದೆ. ದಸರೆಗೆ ಬರುವವರಿಗೆ ಜಂಬೂ ಸವಾರಿಯೇ ಮುಖ್ಯವೇ ಹೊರತು ಇತರೆಯಲ್ಲ. ಆದರೆ ಸಾಂಪ್ರದಾಯಿಕ ದಸರಾ ಎಂದೇ ಹೇಳಿದರೆ ಸಾಕು ಎಂದಿದ್ದಾರೆ. ದಸರೆಯ ದುಂದು ವೆಚ್ಚ ಕಡಿಮೆ ಮಾಡಿ, ಹೊರಗಿನಿಂದ ಕಲಾವಿದರನ್ನು ಕರೆಸುವ ಬದಲು ಸ್ಥಳೀಯರಿಗೆ ಅವಕಾಶ ನೀಡಿ ಎಂದು ಅವರು ಸಲಹೆ ನೀಡಿದ್ದಾರೆ. ಮಹಿಷ ದಸರೆಗೆ ಅವಕಾಶ ನೀಡದಂತೆಯೂ ಅವರು ಆಗ್ರಹಿಸಿದ್ದಾರೆ.

ಇಲಾಖೆಯ ಜೊತೆ ಕೈಜೋಡಿಸಿ: ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಇಲಾಖೆಯ ಜೊತೆ ಕೈಜೋಡಿಸುವಂತೆ ಪ್ರವಾಸೋದ್ಯಮ ಅಭಿವೃದ್ಧಿ ಸಲಹಾ ಸಮಿತಿ ರಚಿಸಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸಿ ಮೈಸೂರಿನ ಪ್ರವಾಸೋದ್ಯಮದ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ. ಸವಿತಾ ತಿಳಿಸಿದರು. ಸೆ.27 ರಂದು ಆಚರಿಸಲಿರುವ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇವಲ ದಸರಾ ಸಂದರ್ಭದಲ್ಲಿ ಮಾತ್ರವಲ್ಲದೆ ಉಳಿದ ದಿನಗಳಲ್ಲಿಯೂ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಬೇಕಾದ ಸಲಹೆ ಸೂಚನೆಗಳನ್ನು ಪಡೆಯಲು ಪ್ರವಾಸೋದ್ಯಮ ಸಲಹಾ ಸಮಿತಿ ರಚಿಸಿ, 2 ತಿಂಗಳಿಗೊಮ್ಮೆ ಸಭೆ ನಡೆಸಿ ಅಲ್ಲಿ ಬರುವ ಸಲಹೆಗಳನ್ನು ಸೂಚನೆಗಳನ್ನು ಸರ್ಕಾರದ ಗಮನಕ್ಕೆ ತರುವುದಕ್ಕೆ ಅಗತ್ಯ ಕ್ರಮ ವಹಿಸಲಾಗುವುದು. ಇದಕ್ಕೆ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ಸಂಘಗಳ ಸಹಕಾರ ಮುಖ್ಯ ಎಂದರು.

ದೇಶದಲ್ಲಿ ಸಂವಿಧಾನಕ್ಕಿಂತ ಬೇರೆ ಯಾವ ಧರ್ಮವು ದೊಡ್ಡದಲ್ಲ: ಸಚಿವ ಮಹದೇವಪ್ಪ

ಜಿಲ್ಲೆಯಲ್ಲಿರುವ ಹೋಟೆಲ್, ರೆಸಾರ್ಟ್ ಮತ್ತು ಹೋಂ ಸ್ಟೇಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಸ್ವಚ್ಛತೆ, ಪರಿಸರ ಮಾಲಿನ್ಯ ತಡೆಗಟ್ಟಲು ಹಾಗೂ ನೈರ್ಮಲ್ಯ, ಶುಚಿತ್ವದ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಇನ್ನಿತರೆ ಪರಿಸರಸ್ನೇಹಿ ಚಟುವಟಿಕೆಗಳನ್ನು ಪ್ರಸ್ತುತಿ ಪಡಿಸಲು ಎಲ್ಲಾ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಸಾಮಾನ್ಯ ಅಡ್ವೈಸರಿಗಳನ್ನು ಪಾಲಿಸುವಂತೆ ಅವರು ಸೂಚಿಸಿದರು.

Follow Us:
Download App:
  • android
  • ios