ಮಂಡ್ಯ[ಫೆ.17]: ನಗರದ ಗುತ್ತಲು ರಸ್ತೆ ಬಸವನಗುಡಿ ಕಾಲನಿ ನಿವಾಸಿ ಜಿ.ಚೇತನ್(29)ಎಂಬ ಯುವಕ ಉಗ್ರರ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ತಾನು ದೇಶದ ಪರವಾಗಿ ಆತ್ಮಾಹುತಿ ಬಾಂಬ್ ದಾಳಿ ಮಾಡಲು ಸಿದ್ದನಿದ್ದೇನೆ ಈ ನಿಟ್ಟಿನಲ್ಲಿ ನನ್ನನ್ನು ಉಪಯೋಗಿಸಿಕೊಳ್ಳುವವರು ಸಂಪರ್ಕಿಸಬಹುದು ಎಂದು ವೀಡಿಯೋ ಮಾಡಿದ್ದಾನೆ. 

"

ದಿನಸಿ ಅಂಗಡಿ ವ್ಯಾಪಾರಿಯಾಗಿರುವ ಚೇತನ್ ನ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದ್ದು, ಯೋಧರ ಬಲಿದಾನ ವ್ಯರ್ಥವಾಗಬಾರದೆಂದು ಪ್ರತೀಕಾರಕ್ಕಾಗಿ ಹಾತೊರೆಯುತ್ತಿರುವ ನೆಟ್ಟಿಗರು ಈ ವೀಡಿಯೋವನ್ನು ಶೇರ್ ಮಾಡಿದ್ದಾರೆ.