ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದರು.

ಬೆಂಗಳೂರು (ಏ.24) : ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಗರದ ಯಶವಂತಪುರದಲ್ಲಿ ನಡೆದಿದೆ.

ಇಂದು ರಾತ್ರಿ 9.30ರ ಸಮಯ ಈ ದುರ್ಘಟನೆ ನಡೆದಿದ್ದು, ಯಶವಂತಪುರದ ಟಾಟಾ ಟಾಟಾ ಇನ್ಸ್ಟಿಟ್ಯೂಟ್ ಬಳಿ ಚಲಿಸುತ್ತಿದ್ದಾಗ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ. ಬೆಂಕಿ ಕಾಣಿಸಿಕೊಳ್ಳುತ್ತಿದ್ದ ಕಾರು ನಿಲ್ಲಿಸಿ ತಕ್ಷಣ ಕಾರಿನಿಂದ ಇಳಿದಿರುವ ಡ್ರೈವರ್. ನೋಡುನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು. ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.