ಕೊಡಿಗೇಹಳ್ಳಿ ಪೊಲೀಸ್‌ ಠಾಣೆ ಸಮೀಪದ ಬಿಬಿಎಂಪಿ ಜಾಗದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ 58 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು (ಮಾ.5) : ಕೊಡಿಗೇಹಳ್ಳಿ ಪೊಲೀಸ್‌ ಠಾಣೆ ಸಮೀಪದ ಬಿಬಿಎಂಪಿ ಜಾಗದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ 58 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಭಾನುವಾರ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊಡಿಗೇಹಳ್ಳಿ ಠಾಣೆ ಪೊಲೀಸರು(Kodigehalli police) ವಿವಿಧ ಪ್ರಕರಣಗಳಲ್ಲಿ ಜಪ್ತಿ(confiscated) ಮಾಡಲಾದ ದ್ವಿಚಕ್ರ ವಾಹನ, ಕಾರುಗಳು, ಕ್ಯಾಂಟರ್‌ ವಾಹನಗಳನ್ನು ಹಲವು ವರ್ಷಗಳಿಂದ ಠಾಣೆ ಸಮೀಪದ ಬಿಬಿಎಂಪಿ(BBMP) ಜಾಗದಲ್ಲಿ ನಿಲ್ಲಿಸಲಾಗಿತ್ತು. ಹೀಗಾಗಿ ಆ ಜಾಗದಲ್ಲಿ ಗಿಡಗಂಟಿಗಳು ಬೆಳೆದಿದ್ದವು. ಭಾನುವಾರ ಮಧಾಹ್ನ ಒಂದು ಗಂಟೆ ಸುಮಾರಿಗೆ ಆ ಜಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ವಾಹನಗಳಿಗೆ ಬೆಂಕಿ ವ್ಯಾಪಿಸಿ ಹೊತ್ತಿ ಉರಿದಿದೆ. ಇದರಿಂದ 58 ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿವೆ.

Bengaluru: ಅಕ್ರಮ ಗ್ಯಾಸ್‌ ರೀಫಿಲ್ಲಿಂಗ್‌ ವೇಳೆ ಸಿಲಿಂಡರ್‌ ಸ್ಫೋಟಕ್ಕೆ ಬಾಲಕ ಬಲಿ!

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಬಂದು ಸುಮಾರು ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಸಕಾಲಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಕಾರುಗಳು, ಕ್ಯಾಂಟರ್‌ಗಳು ಬೆಂಕಿಗಾಹುತಿಯಾಗುವುದು ತಪ್ಪಿದೆ.

ಕೊಡಿಗೇಹಳ್ಳಿ ಠಾಣೆ ಪೊಲೀಸರು ಕಳ್ಳತನ, ವ್ಹೀಲಿಂಗ್‌ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದು, ಠಾಣೆ ಸಮೀಪದ ಬಿಬಿಎಂಪಿ ಜಾಗದಲ್ಲಿ ನಿಲ್ಲಿಸಿದ್ದರು. ಹಲವು ವರ್ಷಗಳಿಂದ ವಾಹನಗಳನ್ನು ನಿಲ್ಲಿಸಿದ್ದರಿಂದ ಆ ಜಾಗ ಗುಜರಿ ಅಂಗಡಿಯಂತೆ ಆಗಿತ್ತು. ಪೊಲೀಸರು ಜಪ್ತಿ ಮಾಡಿದ ವಾಹನಗಳನ್ನು ವಿಲೇವಾರಿ ಮಾಡಲು ವಿಳಂಬ ಮಾಡುತ್ತಿರುವುದರಿಂದ ಠಾಣೆಗಳ ಬಳಿ ವಾಹನಗಳು ತುಕ್ಕು ಹಿಡಿದು ಹಾಳಾಗುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಆರೋಪಿ ತೌಫಿಕ್ ಬಂಧನ

ಜಪ್ತಿ ವಾಹನಗಳನ್ನು ನಿಲುಗಡೆ ಮಾಡಿದ ಸ್ಥಳದ ಸಮೀಪವೇ ಬೆಸ್ಕಾಂ ಟ್ರಾನ್ಸ್‌ಫಾರ್ಮರ್‌ ಇದೆ. ಶಾರ್ಚ್‌ಸಕ್ರ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ವಾಹನಗಳಿಗೆ ಬೆಂಕಿ ವ್ಯಾಪಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.