ಯಾದಗಿರಿ: ಬ್ಲೂಟೂತ್ ಬಳಸಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿದ್ದ ಆರೋಪಿ ಅರೆಸ್ಟ್
ಇಂದು ರಾಜ್ಯಾದ್ಯಂತ ಕೆಪಿಎಸ್ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಬ್ಲೂಟೂತ್ ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯಾದಗಿರಿ (ಅ.28): ಇಂದು ರಾಜ್ಯಾದ್ಯಂತ ಕೆಪಿಎಸ್ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಯಾದಗಿರಿ ಜಿಲ್ಲೆಯಲ್ಲಿ ಬ್ಲೂಟೂತ್ ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುಟ್ಟಪ್ಪ ಬ್ಲೂಟೂತ್ ಬಳಕೆ ಮಾಡಿದ ಆರೋಪಿಯಾಗಿದ್ದು, ಪುಟ್ಟು ಮೂಲತಃ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಸೊನ್ನಾ ಗ್ರಾಮದವನಾಗಿದ್ದಾನೆ. ಪಿಎಸ್ ಐ ಹಗರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಹಸ ಇದೇ ಗ್ರಾಮದವನಾಗಿದ್ದಾನೆ. ಆರೋಪಿ ಪುಟ್ಟಪ್ಪ, ಆರೋಪಿ ತಂದೆ ರಾಜಕುಮಾರ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಆಜ್ಞಾತ ಸ್ಥಳಕ್ಕೆ ಕರೆದೊಯ್ದ ಪೊಲೀಸರು.
ಒಂದೇ ದಿನ ಮೂರು ಸ್ಪರ್ಧಾತ್ಮಕ ಪರೀಕ್ಷೆ, ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ದಿನಾಂಕ ಬದಲಿಸಲು ಖರ್ಗೆ ಮನವಿ
ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ನಕಲು ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ದಾಳಿ ನಡೆಸಿದ್ದ ಯಾದಗಿರಿ ಪೊಲೀಸರು. ನಕಲು ಅಭ್ಯರ್ಥಿಯೇ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಬಂದಿದ್ದಾಗಿ ಪೊಲೀಸ ಮೂಲಗಳಿಂದ ಮಾಹಿತಿ. ವಿಚಾರಣೆ ವೇಳೆ ನಕಲಿ ಅಭ್ಯರ್ಥಿ ಅನ್ನೋದು ಖಚಿತ ಪಡೆದುಕೊಂಡ ಪೊಲೀಸರು. ಮೂವರು ಆರೋಪಿಗಳನ್ನು ಯಾದಗಿರಿ ಠಾಣೆಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸುತ್ತಿರುವ ಪೊಲೀಸರು.
ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತೊಂದು ಹೊಸ ರೂಲ್ಸ್, ಕಂಗಾಲಾದ ಪೋಷಕರು!
ಯಾದಗಿರಿ ಠಾಣೆಗೆ ಡಿಸಿ ಭೇಟಿ
ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಗರ ಠಾಣೆಗೆ ಡಿಸಿ ಸುಶೀಲಾ.ಬಿ ದೌಡಾಯಿಸಿದ್ದಾರೆ. ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವ ಡಿಸಿ. ಮೂವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಪೊಲೀಸರು. ಬಗೆದಷ್ಟು ಬಯಲಾಗ್ತಿದೆ FDA ಪರೀಕ್ಷೆಯ ಅಕ್ರಮ. ಮೂವರನ್ನ ವಿಚಾರಣೆ ನಡೆಸಿದಾಗ ಮತ್ತಷ್ಟು ಜನರ ಹೆಸರು ಬಯಲಿಗೆ ಬರುವ ಸಾಧ್ಯತೆ ಇದೆ. ಪರೀಕ್ಷಾ ಕೇಂದ್ರದ ಹೊರಗಿದ್ದು ಮಾಹಿತಿ ನೀಡ್ತಿದ್ದವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿರೋ ಪೊಲೀಸರು. ಆರೋಪಿಗಳೆಲ್ಲರೂ ಕಲಬುರ್ಗಿ ಮೂಲದವರಾಗಿದ್ದಾರೆ. ಸುಮಾರು 6-8 ಜನರನ್ನ ವಶಕ್ಕೆ ಪಡೆದಿರುವ ಪೊಲೀಸರು.
ವಿಚಾರಣೆ ಬಳಿಕ ಡಿಸಿ ಸುಶೀಲಾ ಬಿ ಸುದ್ದಿಗೋಷ್ಠಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಾಗಿ ಇಂದು ಮತ್ತು ನಾಳೆ ಪರೀಕ್ಷೆ ನಡೆಯುತ್ತಿದೆ. ಯಾದಗಿರಿ ನಗರದಲ್ಲಿ ಒಟ್ಟು 17 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮಾಡಿರುವ ಮಾಹಿತಿ ಎಸ್ಪಿ ಅವರಿಗೆ ಬಂದಿದೆ. ಈ ಹಿನ್ನಲೆ ಮಾಹಿತಿ ಕಲೆ ಹಾಕಿ, ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯುತ್ತಿದ್ದ ಪ್ರಮುಖ ವ್ಯಕ್ತಿಯನ್ನು ವಶಕ್ಕೆ ಪಡೆದು ಬ್ಲೂಟೂತ್ ಡಿವೈಸ್, ಮೊಬೈಲ್ ಜಪ್ತಿ ಮಾಡಲಾಗಿದೆ. ಇಲ್ಲಿವರೆಗೆ ಮೂವರನ್ನು ವಿಚಾರಣೆ ಮಾಡಲಾಗುತ್ತಿದೆ. ವಿಚಾರಣೆ ನಡೆಸಿದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. 5 ಘಂಟೆ ಪರೀಕ್ಷೆ ಮುಗಿದ ಮೇಲೆ ಮತ್ತಷ್ಟು ವ್ಯಕ್ತಿಗಳನ್ನ ವಿಚಾರಣೆ ನಡೆಸಿ ಸಂಪೂರ್ಣ ಮಾಹಿತಿ ನೀಡಲಾಗುವುದು. ಆರೋಪಿ ಮೂವರಲ್ಲಿ ಒಬ್ಬರು ಅಫಜಲಪುರ ಮೂಲದವರು. ಇಂದು ಸಂಜೆ ವೇಳೆ ಮಾಹಿತಿ ಸಿಗಲಿದೆ ಎಂದ ಡಿಸಿ ಸುಶೀಲಾ.