Asianet Suvarna News Asianet Suvarna News

ಲಿಂಗಾಯುತ ಸಿಎಂಗಳು ಭ್ರಷ್ಟರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ರಾಜ್ಯದ ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಹೇಳಿದ್ದ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ನ್ಯಾಯಾಲಯ ವಜಾಗೊಳಿಸಿದೆ.

 

ACMM court dismissed defamation case against Karnataka CM Siddaramaiah sat
Author
First Published Jun 13, 2023, 4:40 PM IST

ಬೆಂಗಳೂರು (ಜೂ.13): ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ರಾಜ್ಯದ ಲಿಂಗಾಯತ ಮುಖ್ಯಮಂತ್ರಿಗಳು (ಲಿಂಗಾಯತ ಸಿಎಂಗಳು) ಭ್ರಷ್ಟರು ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಲಿಂಗಾಯುತ ಸಿಎಂಗಳು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಬಿಗ್ ರಿಲೀಫ್ ನೀಡಲಾಗಿದೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ರಾಜ್ಯದ ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಈ ಕುರಿತು ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನೂ ಮಾಡಲಾಗಿತ್ತು. ಆದರೆ, ಈ ಕುರಿತು ವಿಚಾರಣೆಯನ್ನು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಪ್ರೀತ್.ಜೆ
ಅವರು, ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. 

ಸಚಿವ ಬಿ.ನಾಗೇಂದ್ರ, ಜನಾರ್ಧನರೆಡ್ಡಿಗೆ ಮತ್ತೆ ಅಕ್ರಮ ಗಣಿಗಾರಿಕೆ ಉರುಳು

ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ವಜಾ ಆಗಿದ್ದರಿಂದ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ. ಸಿದ್ದರಾಮಯ್ಯ ಅವರ ವಿರುದ್ಧ ಶಂಕರ್ ಶೇಟ್ ಮತ್ತು ಮಲ್ಲಯ್ಯ ಹಿರೇಮಠ್ ಅವರು ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ದಾಖಲು ಮಾಡಿದ್ದರು. ಈ ಬಗ್ಗೆ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಅರ್ಜಿ ವಜಾಗೊಳಿಸಿದೆ. 

Follow Us:
Download App:
  • android
  • ios