Asianet Suvarna News Asianet Suvarna News

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕ್ರಮ: ಸಚಿವ ಆರಗ ಜ್ಞಾನೇಂದ್ರ

*  ನಕಲಿ ದಾಖಲೆ ನೀಡುವ ದೊಡ್ಡ ಜಾಲ ಇದೆ
*  ಇಂತಹ ದಾಖಲೆಗಳನ್ನು ಪರಿಶೀಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ
*  ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು
 

Action for Detection of Illegal Bangladeshi Immigrants in Karnataka Says Araga Jnanendra grg
Author
First Published Mar 11, 2022, 8:05 AM IST

ಬೆಂಗಳೂರು(ಮಾ.11): ಕೊಡಗು(Kodagu) ಜಿಲ್ಲೆಯಲ್ಲಿ ಅಸ್ಸಾಂ, ಪಶ್ಚಿಮ ಬಂಗಾಳ ರಾಜ್ಯದ ನಾಗರಿಕರ ಹೆಸರಿನಲ್ಲಿ ವಾಸಿಸುತ್ತಿರುವ ಬಾಂಗ್ಲಾದೇಶಿಗರ(Bangladeshis) ಪತ್ತೆಗೆ ವಿಶೇಷ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ತಿಳಿಸಿದರು. 

ಕಾಂಗ್ರೆಸ್‌ನ(Congress) ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊಡಗಿನಲ್ಲಿ ಸುಮಾರು ಎಂಟು ಸಾವಿರಕ್ಕೂ ಹೆಚ್ಚು ಜನರು ಅಸ್ಸಾಂ, ಈಶಾನ್ಯ ರಾಜ್ಯ ಮತ್ತು ಉತ್ತರ ಭಾರತದ(North India) ರಾಜ್ಯಗಳಿಂದ ಕಾಫಿ ಕೊಯ್ಲಿನ ಸಮಯದಲ್ಲಿ ಬರುತ್ತಾರೆ. ವಿಶೇಷವಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದವರ ಹೆಸರಿನಲ್ಲಿ ಬಾಂಗ್ಲಾದೇಶೀಯರು ಅಕ್ರಮವಾಗಿ ವಾಸಿಸುತ್ತಿದ್ದಾರೆಂದು ತಿಳಿದುಬಂದಿದೆ. ರಾಜ್ಯಕ್ಕೆ(Karnataka) ಬರುವಾಗ ಅವರು ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ ತೆಗೆದುಕೊಂಡು ಬರುತ್ತಾರೆ. ಇವರಿಗೆ ಇಂತಹ ನಕಲಿ ದಾಖಲೆಗಳನ್ನು(Fake Documents) ನೀಡುವ ದೊಡ್ಡ ಜಾಲ ಇದೆ. ಹೀಗಾಗಿ ಈ ಬಗ್ಗೆ ಸ್ಥಳೀಯ ಪೊಲೀಸ್‌(Police) ಅಧಿಕಾರಿಗಳಿಗೆ ಇಂತಹ ದಾಖಲೆಗಳನ್ನು ಪರಿಶೀಲಿಸುವಂತೆ ತಿಳಿಸಲಾಗಿದೆ. ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.

Hindu Activist Murder: ಪೊಲೀಸರು ಎಸಗಿರುವ ಆರೋಪದ ಬಗ್ಗೆಯೂ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ!

ಕೂಲಿ ಮತ್ತಿತರ ಕೆಲಸಕ್ಕೆ ನೇಮಕ ಮಾಡಿಕೊಳ್ಳುವ ವೇಳೆ ಕಾರ್ಮಿಕರ ಗುರುತಿನ ಚೀಟಿ ಹಾಗೂ ಕಾಯಂ ವಿಳಾಸವನ್ನು ಪಡೆದು ಭಾವಚಿತ್ರಗಳ ಸಹಿತ ಪೊಲೀಸ್‌ ಠಾಣೆಗಳಿಗೆ ಮಾಹಿತಿ ನೀಡುವಂತೆ ಸ್ಥಳೀಯರಿಗೆ ಸೂಚನೆ ನೀಡಲಾಗಿದೆ. ಇಂತಹ ಚೀಟಿಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

SDPI, PFI ನಿಷೇಧ ಪ್ರಸ್ತಾಪ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿರಸಿ: ಎಸ್‌ಡಿಪಿಐ (SDPI), ಪಿಎಫ್‌ಐ (PFU) ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಹಿಂದೂಪರ ಸಂಘಟನೆಗಳ ಒತ್ತಾಯ ಹೆಚ್ಚಾಗುತ್ತಿರುವ ಬೆನ್ನಲ್ಲೇ ಈ ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಸ್ಪಷ್ಟಪಡಿಸಿದ್ದರು. ನಿಷೇಧಿಸಿದರೆ ಅವರು ಬೇರೆ ಹೆಸರಿನ ಸಂಘಟನೆ ಕಟ್ಟಿಕೊಳ್ಳುವ ಸಾಧ್ಯತೆ ಇದೆ. 

ಹೀಗಾಗಿ ಅವರ ಕಾರ್ಯ ಚಟುವಟಿಕೆ ಬಗ್ಗೆ ನಿಗಾ ಇಡಲಾಗುವುದು ಎಂದು ತಿಳಿಸಿದ್ದಾರೆ. ನಗರದಲ್ಲಿ ಮಾ.06 ರಂದು  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಡಿಪಿಐ ನಿಷೇಧಿಸುವುದಾದರೆ ಆ ಕೆಲಸವನ್ನು ಕೇಂದ್ರ ಮಾಡಬೇಕು. ಕೆಲವು ರಾಜ್ಯಗಳು ತಾವೇ ಮುಂದಾಗಿ ನಿಷೇಧಿಸಿವೆಯಾದರೂ ಕರ್ನಾಟಕದಲ್ಲಿ ನಿಷೇಧಿಸುವ ಪ್ರಸ್ತಾಪ ಇಲ್ಲ. ಅವರ ಕಾರ್ಯ ಚಟುವಟಿಕೆಯ ವರದಿಯನ್ನು ನಿರಂತರವಾಗಿ ಕೇಂದ್ರಕ್ಕೆ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದ್ದರು.

ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಉತ್ತಮವಾಗಿದೆ. ಶಿವಮೊಗ್ಗ, ಆಳಂದ ಘಟನೆ ಹೊರತುಪಡಿಸಿದರೆ ಬೇರೆಲ್ಲೂ ಇಂತಹ ಘಟನೆ ನಡೆದಿಲ್ಲ. ಶಿವಮೊಗ್ಗದಲ್ಲಿ ಕೊಲೆ ನಡೆಸಿದ ವ್ಯಕ್ತಿಗಳನ್ನು ತ್ವರಿತವಾಗಿ ಬಂಧಿಸಿ ಅವರ ಹೆಡೆಮುರಿ ಕಟ್ಟಿದ್ದೇವೆ ಎಂದರು. ಇನ್ನು ಕೆಲವು ಪ್ರಕರಣಗಳಲ್ಲಿ ಅಮಾಯಕ ಹಿಂದೂಗಳ ಮೇಲೆ ಪ್ರಕರಣಗಳಾಗಿವೆ. ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಾಸ್ತವ ತಿಳಿಸಿಕೊಡುವ ಕಾರ್ಯ ಆಗುತ್ತಿದೆ ಎಂದು ಹೇಳಿದ್ದರು. 

Detention Center: ಬೆಂಗ್ಳೂರಿನ 4 ಕಡೆ ವಿದೇಶಿಗರ ಬಂಧನ: ಸಚಿವ ಜ್ಞಾನೇಂದ್ರ

ಮತ್ತೊಮ್ಮೆ ನಮ್ಮ ಧರ್ಮ, ಜಾತಿ ಒಂದೇ ಅಂತ ತೋರಿಸಬೇಕು: 

ಶಾಲೆಯಲ್ಲಿ ಸಮವಸ್ತ್ರ ಕಡ್ಡಾಯವಾಗಿ ಪಾಲನೆ ಸಂಬಂಧ ಕೆಲ ಶಾಸಕರು ಭೇಟಿಯಾಗಿ ಮನವಿ ಪತ್ರವನ್ನ ಕೊಟ್ಟಿದ್ದಾರೆ. ಸಮವಸ್ತ್ರ ಅಂದರೆ ಅದು ಸಮಾನತೆ, ಸಂಸ್ಕಾರ ತುಂಬುವ ಕೆಲಸ ಆಗಬೇಕಿದೆ. ಮತ್ತೊಮ್ಮೆ ನಮ್ಮ ಧರ್ಮ, ಜಾತಿ ಒಂದೇ ಅಂತ ತೋರಿಸಬೇಕು. ಕೋರ್ಟ್ ಆದೇಶದ ಪ್ರಕಾರ ಎಲ್ಲರೂ ನಡೆದುಕೊಳ್ಳಬೇಕು ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.  ನಗರದ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಕಾಲೇಜುಗಳಲ್ಲಿ ಇನ್ನೂ ಹಿಜಾಬ್ (Hijab) ಬಗ್ಗೆ ಅನಗತ್ಯ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ. 

ಗೊಂದಲ ಸೃಷ್ಟಿಸುವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕೆಲವನ್ನ ಈಗಾಗಲೇ ಅರೆಸ್ಟ್ ಮಾಡಲಾಗಿದೆ. ಕಣ್ಣಿನಿಂದ ನೋಡಿಕೊಂಡು ಸುಮ್ಮನಿರಲು ಸಾಧ್ಯವೇ ಇಲ್ಲ. ಅತಿರೇಕಕ್ಕೆ ಹೋದರೇ ಕೈಕಟ್ಟಿ ಕೂಡಲು ಆಗಲ್ಲ. ಇದರ ಹಿಂದೆ ಮತಾಂಧ ಶಕ್ತಿಗಳು ಕಾರ್ಯನಿರ್ವಹಿಸುತ್ತಿವೆ. ಮತಾಂಧ ಶಕ್ತಿಗಳು ಮಕ್ಕಳಲ್ಲಿ ವಿಷಬೀಜ ಬಿತ್ತುತ್ತಿವೆ. ವಿವಾದ (Controversy) ಸೃಷ್ಟಿಸುವ ಸಂಘಟನೆಗಳನ್ನ ನಿರ್ಜೀವ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೋರ್ಟಿನ ಮದ್ಯಂತರ ಆದೇಶವನ್ನ ಸರ್ಕಾರ ಪಾಲನೆ ಮಾಡುತ್ತಿದೆ ಅಂತ ಹೇಳಿದ್ದಾರೆ.  
 

Follow Us:
Download App:
  • android
  • ios