Asianet Suvarna News Asianet Suvarna News

ಶ್ರೀಮಂತರ ಆಸ್ತಿ ಬಡವರಿಗೆ ಮರುಹಂಚಿಕೆ ಮಾಡುವಂತೆ ನಟ ಚೇತನ್ ಆಗ್ರಹ

ಸಿಎಂ ಅಹಿಂದ ಪರ ಕೆಲಸ ಮಾಡುತ್ತಿಲ್ಲ. ಅಲೆಮಾರಿ ಜನಾಂಗಗಳ ಅಭಿವೃದ್ಧಿ ಹಣ ನೀಡದೆ ಆಂಜನಾದ್ರಿ ಹನುಮ ಮಂದಿರದ ಅಭಿವೃದ್ಧಿಗೆ ನೂರು ಕೋಟಿ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್ ವಾಗ್ದಾಳಿ ನಡೆಸಿದರು.

Actor chetan kumar outraged against CM Siddaramaiah at chikkodi belagavi district rav
Author
First Published May 24, 2024, 2:24 PM IST

ಚಿಕ್ಕೋಡಿ (ಮೇ.24): ಸಿಎಂ ಅಹಿಂದ ಪರ ಕೆಲಸ ಮಾಡುತ್ತಿಲ್ಲ. ಅಲೆಮಾರಿ ಜನಾಂಗಗಳ ಅಭಿವೃದ್ಧಿ ಹಣ ನೀಡದೆ ಆಂಜನಾದ್ರಿ ಹನುಮ ಮಂದಿರದ ಅಭಿವೃದ್ಧಿಗೆ ನೂರು ಕೋಟಿ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್ ವಾಗ್ದಾಳಿ ನಡೆಸಿದರು.

ಇಂದು ಚಿಕ್ಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ಚೇತನ್, ಅಂಜನಾದ್ರಿ ಅಭಿವೃದ್ಧಿಗೆ ಸಿಎಂ ನೂರು ಕೋಟಿ ಹಣ ನೀಡಿರುವ ವಿಚಾರವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಆ ಹಣವನ್ನು ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ಬಳಸುವಂತೆ ಒತ್ತಾಯಿಸಿದರು.

ಗಾಂಧಿ ಕುಟುಂಬದ ಮೇಲೆ ಆರೋಪ ಮಾಡೋದನ್ನ ಮೋದಿ ಮೊದಲು ನಿಲ್ಲಿಸಬೇಕು: ಮಲ್ಲಿಕಾರ್ಜುನ ಖರ್ಗೆ ಗರಂ

ಚಿಕ್ಕೋಡಿ ಪಟ್ಟಣದ ರಾಮನಗರ ಅಲೆಮಾರಿ ಜನಾಂಗದ 82 ಕುಟುಂಬಗಳು ಇನ್ನೂ ಕೂಡ ಬಡತನದಲ್ಲಿವೆ, ವಾಸ ಮಾಡಲು ಒಂದು ಸೂರು ಕಾಣದೇ ಗುಡಿಸಲಿನಲ್ಲಿ ಬದುಕು ಸಾಗಿಸುತ್ತಿದ್ದಾರೆ. ಆದರೆ ಸೋಮಾರಿ ಸಿದ್ದರಾಮಯ್ಯ ಅಲೆಮಾರಿ ಜನಾಂಗಕ್ಕೆ ಬಜೆಟ್‌ನಲ್ಲಿ ಒಂದು ರೂಪಾಯಿ ಹಣವನ್ನೂ ನೀಡಿಲ್ಲ.  ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಮುಂದಾಗದೇ ಹನುಮಾನ ಜನ್ಮಭೂಮಿ ಅಭಿವೃದ್ಧಿಗೆ 100 ಕೋಟಿ ಕೊಟ್ಟಿದ್ದೇ ಎಂದು ಹೇಳುವ ಸಿದ್ದರಾಮಯ್ಯನವರಿಗೆ ಇದೇ ಸರ್ಕಾರದ ಆದ್ಯತೆನಾ? ಎಂದು ಪ್ರಶ್ನಿಸಿದರು. ಕೂಡಲೇ 82 ಕುಟುಂಬಗಳಿಗೆ ಸೂರು ಕಲ್ಪಿಸುವಂತೆ ಆಗ್ರಹಿಸಿದರು.

'ಸಿಎಂ ಸೋಮಾರಿ ಸಿದ್ದು' ಎಂದು ಹೀಗಳೆದ ನಟ ಅಹಿಂಸಾ ಚೇತನ್

ತಾನು ಅಹಿಂದ ಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ನಿಜವಾಗಲೂ ಅಹಿಂದಪರ ಕೆಲಸ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರಲ್ಲದೇ, ಅಹಿಂದ ಪರ ಕೆಲಸ ಮಾಡದೇ ಸೋಮಾರಿಯಾಗಿದ್ದಾರೆ ಎಂದು ಕಿಡಿಕಾರಿದು. ಇದೇ ವೇಳೆ ಸರ್ಕಾರ ಜಾತಿಗಣತಿ ಬಿಡುಗಡೆ ಮಾಡಿ ಶ್ರೀಮಂತರ ಆಸ್ತಿಯನ್ನ ಬಡವರಿಗೆ ಮರುಹಂಚಿಕೆ ಮಾಡುವಂತೆ ಒತ್ತಾಯಿಸಿದರು.

Latest Videos
Follow Us:
Download App:
  • android
  • ios