Darshan Thoogudeepa ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಏಳು ಮಂದಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಂಡಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ರದ್ದುಗೊಂಡಿದೆ. ಎ1 ಪವಿತ್ರಾ ಗೌಡ, ಎ2 ದರ್ಶನ್ ಸೇರಿ 7 ಜನರ ಜಾಮೀನು ರದ್ದುಗೊಂಡಿದೆ. ನ್ಯಾ. ಮಹದೇವನ್ ತೀರ್ಪು ಪ್ರಕಟಿಸಿದ್ದು, ತಕ್ಷಣ ಬಂಧಿಸುವಂತೆ ಆದೇಶಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಏಳು ಮಂದಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಂಡಿದೆ. ಜೊತೆಗೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ಗೆ ಐಷಾರಾಮಿ ಸೌಲಭ್ಯ ನೀಡಲು ಸಹಾಯ ಮಾಡಿದ್ದ ಜೈಲಾಧಿಕಾರಿಗಳನ್ನು ಸಸ್ಪೆಂಡ್‌ ಮಾಡುಕವಂತೆ ಆದೇಶ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಈ ಕೇಸ್‌ ನಲ್ಲಿ ಬಹುದೊಡ್ಡ ಗೆಲುವಾಗಿದೆ. ಡಿ ಗ್ಯಾಂಗ್ ವಿರುದ್ಧ ಕರ್ನಾಟಕ ಸರ್ಕಾರ ಹೋರಾಡಿದ್ದಕ್ಕೆ ಬಹುದೊಡ್ಡ ಗೆಲುವಾಗಿದೆ.

ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ತಮ್ಮ 33 ವರ್ಷದ ತನ್ನದೇ ಅಭಿಮಾನಿಯ ಹತ್ಯೆಯಲ್ಲಿ ದರ್ಶನ್‌ ಭಾಗಿಯಾಗಿದ್ದ ಎಂದು ಅರೋಪಿಸಲಾಗಿದೆ. ಈ ಕೇಸ್‌ನಲ್ಲಿ ದರ್ಶನ್‌ಗೆ ಜಾಮೀನು ಮಂಜೂರು ಮಾಡಿ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 13, 2024 ರಂದು ನೀಡಿದ ಜಾಮೀನು ಆದೇಶವನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು.

ಕರ್ನಾಟಕ ಹೈಕೋರ್ಟ್ ಆರೋಪಿಗಳಿಗೆ ವಿವೇಚನೆ ಬಳಸದೆ ಜಾಮೀನು ನೀಡಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, ಹೈಕೋರ್ಟ್‌ನ ಆದೇಶವು ವಿಕೃತವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಜುಲೈ 24 ರಂದು, ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು ತೀರ್ಪನ್ನು ಕಾಯ್ದಿರಿಸಿತ್ತು. ದರ್ಶನ್ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂಬ ಇಬ್ಬರು ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದೃಢೀಕರಿಸಲು ಯಾವುದೇ ಪುರಾವೆಗಳಿವೆಯೇ ಎಂದು ರಾಜ್ಯವನ್ನು ಪ್ರಶ್ನಿಸಿತ್ತು. ಅದೇ ಸಮಯದಲ್ಲಿ, ದರ್ಶನ್ ಅವರಿಗೆ ಜಾಮೀನು ನೀಡುವಲ್ಲಿ ಹೈಕೋರ್ಟ್‌ನ ವಿವೇಚನೆಯ ಬಳಕೆಯ ಬಗ್ಗೆ ಪೀಠವು ಗಂಭೀರ ಕಳವಳಗಳನ್ನು ವ್ಯಕ್ತಪಡಿಸಿತು.

ಜುಲೈ 17 ರಂದು, ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಅವರಿಗೆ ಜಾಮೀನು ನೀಡುವಲ್ಲಿ ತನ್ನ ವಿವೇಚನೆಯನ್ನು ಬಳಸಿದ ರೀತಿ ಅನಿಸುತ್ತಿಲ್ಲ ಎಂದು ನ್ಯಾಯಾಲಯ ಮೌಖಿಕವಾಗಿ ತಿಳಿಸಿತ್ತು.ಹೈಕೋರ್ಟ್ ತೀರ್ಪಿನಲ್ಲಿ ನ್ಯಾಯಾಲಯ ಏಕೆ ಹಸ್ತಕ್ಷೇಪ ಮಾಡಬಾರದು ಎಂಬುದಕ್ಕೆ ಉತ್ತಮ ಕಾರಣಗಳನ್ನು ನೀಡುವಂತೆ ದರ್ಶನ್ ಅವರ ವಕೀಲರನ್ನು ಮೌಖಿಕವಾಗಿ ಕೇಳಿತ್ತು. ನ್ಯಾಯಾಧೀಶ ಪಾರ್ದಿವಾಲಾ ಅವರು ಮೌಖಿಕವಾಗಿ, ಹೈಕೋರ್ಟ್ ಮೂಲತಃ ಆರೋಪಿಗಳ ಪರವಾಗಿ ಖುಲಾಸೆಗೊಳಿಸುವ ತೀರ್ಪನ್ನು ನೀಡಿದೆ ಎಂದಿದ್ದರು.

ಜೂನ್ 2024 ರಲ್ಲಿ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿನ ಶೆಡ್‌ನಲ್ಲಿ ಮೂರು ದಿನಗಳ ಕಾಲ ಚಿತ್ರಹಿಂಸೆ ನೀಡಿದ್ದರು ಎಂದು ಆರೋಪಿಸಲಾಗಿದೆ. ನಂತರ ಮೃತ ವ್ಯಕ್ತಿ ದೌರ್ಜನ್ಯಕ್ಕೆ ಒಳಗಾಗಿ ಸಾವನ್ನಪ್ಪಿದ್ದು, ಪೊಲೀಸರ ವರದಿಯ ಪ್ರಕಾರ ಮೃತದೇಹವನ್ನು ಚರಂಡಿಗೆ ಎಸೆಯಲಾಗಿದೆ. ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ನಂತರ ಆರೋಪಿಗಳಾದ ದರ್ಶನ್, ಪವಿತ್ರ, ಅನು ಕುಮಾರ್, ಲಕ್ಷ್ಮಣ್ ಎಂ, ವಿ ವಿನಯ್, ಜಗದೀಶ್, ಪ್ರದೂಷ್ ಎಸ್ ರಾವ್ ಮತ್ತು ನಾಗರಾಜು ಆರ್ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.