ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ: ನಟ ಉಪೇಂದ್ರ ಹೀಗಂದಿದ್ದೇಕೆ?
ಪರಿಶಿಷ್ಟ ಜಾತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸ್ಯಾಂಡಲ್‌ವುಡ್ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಫೇಸ್ಬುಕ್ ಖಾತೆಯಲ್ಲಿ ಕ್ಷಮಾಪಣೆ ಕೋರಿದ್ದರು. ಇದಾದ ಬಳಿಕ ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು (ಆ.13): ಪರಿಶಿಷ್ಟ ಜಾತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸ್ಯಾಂಡಲ್‌ವುಡ್ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಫೇಸ್ಬುಕ್ ಖಾತೆಯಲ್ಲಿ ಕ್ಷಮಾಪಣೆ ಕೋರಿದ್ದರು. ಇದಾದ ಬಳಿಕ ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಹೌದು! ಇದೀಗ ತಮ್ಮ ಟ್ವೀಟರ್ ಖಾತೆಯಲ್ಲಿ ಮತ್ತೊಂದು ಪೋಸ್ಟ್ ಹಾಕಿರುವ ಉಪೇಂದ್ರ, 'ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ನನಗೆ ಹುಚ್ಚೇ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ದ್ವೇಷ ?' ಎಂದು ಬರೆದುಕೊಂಡಿದ್ದಾರೆ.
ಬುದ್ಧಿವಂತ ನಟ ಉಪೇಂದ್ರ ಹೊಲೆಗೇರಿ ಹೇಳಿಕೆ: ಎಫ್‌ಐಆರ್ ದಾಖಲಿಸಿದ ಸಮಾಜ ಕಲ್ಯಾಣ ಇಲಾಖೆ
ಏನಿದು ಪ್ರಕರಣ: ನಟ ಉಪೇಂದ್ರ ಅವರು ಆನ್ಲೈನ್ ಕಾರ್ಯಕ್ರಮವೊಂದರಲ್ಲಿ ಪರಿಶಿಷ್ಟ ಜಾತಿಯವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ನಟ ಉಪೇಂದ್ರ ಅವರ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿತ್ತು.
ದಲಿತ ಸಮುದಾಯದ ಜಾತಿ ಭಾವನೆಗೆ ಧಕ್ಕೆ: ಉಪೇಂದ್ರ ಮಾತನಾಡಿರುವ ಮಾತಿನಿಂದ ದಲಿತ ಸಮಾಜದಲ್ಲಿನ ಜಾತಿ ಭಾವನೆಗೆ ಘಾಸಿ ಉಂಟಾಗಿದೆ. ಆದ್ದರಿಂದ ಉಪೇಂದರ ಅವರ ಮೇಲೆ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಸಮತಾ ಸೈನಿಕ ದಳದ ಮುಖಂಡರು ಪತ್ರಮುಖೇನ ಸಾಮಾಜ ಕಲ್ಯಾಣ ಇಲಾಖೆಗೆ ಪತ್ರವನ್ನು ಬರೆದಿದ್ದಾರೆ. ಇನ್ನು ವಿಡಿಯೋ ಕ್ಲಿಪ್ ಅನ್ನು ನೋಡಲಾಗಿ, ಮನವಿ ಪತ್ರದಲ್ಲಿ ಸತ್ಯಾಂಶ ಇದ್ದುದರಿಂದ ಅವರ ಮೇಲೆ ದೂರು ದಾಖಲಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ನಟನಾಗಿರುವ ಉಪೇಂದ್ರ ಅವರು ರಾಜ್ಯಕ್ಕೆ ಮಾದರಿಯಾಗಬೇಕಿತ್ತು. ಆದರೆ, ಈಗ ಅವರ ಹೇಳಿಕೆಯನ್ನು ಕೆಲವರು ಅನುಕರಣೆ ಮಾಡಿದಲ್ಲಿ ಸಮಾಜದ ಸ್ವಾಸ್ಥ್ಯ ಹಾಳಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಜಾತಿನಿಂದನೆ ಆರೋಪದಡಿ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಲಾಗಿದೆ.
'ಊರು ಎಂದ್ಮೇಲೆ ಹೊಲೆಗೇರಿ ಇರುತ್ತೆ' ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿದ ಬುದ್ಧಿವಂತ ಉಪೇಂದ್ರ
ಉಪೇಂದ್ರನಿಗೆ ಕಂಡಲ್ಲಿ ಮಸಿ ಬಳಿಯುವುದಾಗಿ ಎಚ್ಚರಿಕೆ ಕೊಟ್ಟ ಪ್ರತಿಭಟನಾಕಾರರು: ಇನ್ನು ನಟ ಉಪೇಂದ್ರ ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ ಎಂದು ಹೇಳಿಕೆ ನೀಡಿ ದಲಿತರ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ರಾಮನಗರ ಜಿಲ್ಲೆಯ ಹಾರೋಹಳ್ಳಿಯಲ್ಲಿ ಪ್ರತಿಭಟನೆ ನಟ ಉಪೇಂದ್ರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮತಾ ಸೈನಿಕ ದಳ ಸೇರಿದಂತೆ ವಿವಿಧ ದಲಿತ ಸಂಘಟನೆಗಳು ಹಾಗೂ ದಲಿತ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಉಪೇಂದ್ರ ಅವರು ತಮ್ಮ ಹೇಳಿಕೆ ವಾಪಸ್ ಪಡೆದು ಬಹಿರಂಗವಾಗಿ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಕಂಡಲ್ಲಿ ಮಸಿ ಬಳಿಯುವುದಾಗಿ ಉಪೇಂದ್ರನಿಗೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ, ಅವರ ಚಲನಚಿತ್ರಗಳಿಗೂ ಘೆರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.