Asianet Suvarna News Asianet Suvarna News

ನಾಡಹಬ್ಬ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ಕಾರ್ಯಾಚರಣೆ

ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ವೀಪರ್, ಅಶ್ವಮೇಧ ಸಾರಿಗೆ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ.  ದಸರಾ ಹಬ್ಬದ ಪ್ರಯುಕ್ತ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅ.9  ರಿಂದ ಅ. 12 ರವರೆಗೆ ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಲಾಗಿದೆ. 
 

Additional bus operation by KSRTC for Dasara Festival in Karnataka grg
Author
First Published Oct 4, 2024, 6:52 PM IST | Last Updated Oct 4, 2024, 6:52 PM IST

ಬೆಂಗಳೂರು(ಅ.04):  ದಸರಾ ರಜೆಗಳ ಪ್ರಯುಕ್ತ ಕರಾರಸಾ ನಿಗಮದಿಂದ ವಿಶೇಷ ಸಾರಿಗೆ ವ್ಯವಸ್ಥೆಯನ್ನ ಮಾಡಲಾಗಿದೆ. ಕೆಎಸ್ಆರ್ಟಿಸಿ ನಿಗಮದಿಂದ ಹೆಚ್ಚುವರಿ ಬಸ್ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 

ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ವೀಪರ್, ಅಶ್ವಮೇಧ ಸಾರಿಗೆ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ.  ದಸರಾ ಹಬ್ಬದ ಪ್ರಯುಕ್ತ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅ.9  ರಿಂದ ಅ. 12 ರವರೆಗೆ ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಲಾಗಿದೆ.  ವಿಶೇಶ ಬಸ್‌ಗಳು ಬೆಂಗಳೂರಿನಿಂದ ರಾಜ್ಯದ ಮತ್ತು ಅಂರಾರಾಜ್ಯದ ವಿವಿಧ ಸ್ಥಳಗಳಿಗೆ ಹೊರಡಲಿವೆ. 

ಮಹಿಳೆಯರ ಉಚಿತ ಪ್ರಯಾಣ: 'ಶಕ್ತಿ' ಮೀರಿ ಪ್ರಯಾಣಿಸಿದರೆ ಓವರ್ ಲೋಡ್ ಕೇಸ್?

ಯಾವ ಯಾವ ಬಸ್ ನಿಲ್ದಾಣದಿಂದ ಹೊರಡಲಿವೆ?

 *  ಕೆಂಪೇಗೌಡ ಬಸ್ ನಿಲ್ದಾಣ,
 * ಮೈಸೂರು ರಸ್ತೆ ಬಸ್ ನಿಲ್ದಾಣ 
 * ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣ

ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ. 13‌ ರಿಂದ ಅ. 14 ರವರೆಗೆ ವಿಶೇಷ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ.  ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಕಾರ್ಯಚರಣೆ ನಡೆಯಲಿದೆ. 

ಸಾರಿಗೆ ನೌಕಕರ ಬಹುದಿನದ ಬೇಡಿಕೆ ಈಡೇರಿಸಿದ ಕೆಎಸ್‌ಆರ್‌ಟಿಸಿ; ಸರ್ಕಾರಿ ನೌಕರರಂತೆ ವೇತನ ಸೌಲಭ್ಯ

ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ನಡೆಯಲಿದೆ. 

ಮೈಸೂರು ದಸರಾ-2024 ಪ್ರಯುಕ್ತ KSRTC ನಿಗಮದಿಂದ ಒಟ್ಟು 660 ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ, ಜೊತೆಗೆ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು. ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 400 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 660 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಣೆಗಿಳಿಯಲಿವೆ. 

Latest Videos
Follow Us:
Download App:
  • android
  • ios