ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಕಡೆ ಹೆಚ್ಚಿನ ಬಸ್‌ಗಳನ್ನು ಸಂಚರಿಸುವಂತೆ ಮಾಡಿ ನೂಕುನುಗ್ಗಲು ಇರದಂತೆ ಮಾಡಬೇಕು. ಟಿಕೆಟ್ ವಿತರಣೆ, ಗುರುತಿಸಿರುವ 10 ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ಸುಗಮ ಸಂಚಾರಕ್ಕೆ ಅನುವಾಗುವಂತೆ ಮಾಡಬೇಕು ಎಂದು ಸೂಚಿಸಿದ ಅನ್ಬುಕುಮಾರ್
ಬೆಂಗಳೂರು(ಜೂ.21): ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸಲು ಅವಕಾಶ ನೀಡುವ ‘ಶಕ್ತಿ’ ಯೋಜನೆಯನ್ನು ಯಶಸ್ವಿಗೊಳಿಸಲು ಜನಸಂದಣಿ ಹೆಚ್ಚಿರುವ 10 ಸ್ಥಳಗಳನ್ನು ಗುರುತಿಸಬೇಕು ಹಾಗೂ ವಿಶೇಷ ಜಾತ್ರೆ, ಹಬ್ಬವಿರುವ ದಿನಗಳಂದು ಪ್ರಮುಖ ಸ್ಥಳಗಳಿಗೆ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳ ನಿಯೋಜನೆ ಮಾಡುವಂತೆ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಯೋಜನೆ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಮಂಗಳವಾರ ಕೆಎಸ್ಸಾರ್ಟಿಸಿಯ 16 ವಿಭಾಗಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಿಭಾಗೀಯ ಸಂಚಾರ ಅಧಿಕಾರಿಗಳು ಹಾಗೂ 83 ಘಟಕ ವ್ಯವಸ್ಥಾಪಕರೊಂದಿಗೆ ವಚ್ರ್ಯುವಲ್ ಸಭೆ ನಡೆಸಿದರು.
ಬಾಗಲಕೋಟೆ: ಬಸ್ ಕಿಟಕಿಗಳೇ ಬಾಗಿಲುಗಳಾದವು..!
ಈ ವೇಳೆ ಮಾತನಾಡಿದ ಅನ್ಬುಕುಮಾರ್, ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಕಡೆ ಹೆಚ್ಚಿನ ಬಸ್‌ಗಳನ್ನು ಸಂಚರಿಸುವಂತೆ ಮಾಡಿ ನೂಕುನುಗ್ಗಲು ಇರದಂತೆ ಮಾಡಬೇಕು. ಟಿಕೆಟ್ ವಿತರಣೆ, ಗುರುತಿಸಿರುವ 10 ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ಸುಗಮ ಸಂಚಾರಕ್ಕೆ ಅನುವಾಗುವಂತೆ ಮಾಡಬೇಕು ಎಂದು ಸೂಚಿಸಿದರು.
ಬಸ್ಸುಗಳ ನಿಯೋಜನೆ ಮತ್ತು ಸಾರಿಗೆ ವ್ಯವಸ್ಥೆಯಲ್ಲಿ ಗೊಂದಲಗಳಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ನಿಗಮದ ಚಾಲನಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿ, ಅವರಿಂದ ಬರುವ ಅಭಿಪ್ರಾಯದಂತೆ ಸೇವೆ ಒದಗಿಸಬೇಕು. ಜತೆಗೆ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳು, ಉಸ್ತುವಾರಿ ಅಧಿಕಾರಿಗಳು ಪ್ರತಿವಾರ ವಿಭಾಗಗಳಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಬೇಕು ಹಾಗೂ ಸಭೆಗಳನ್ನು ನಡೆಸಬೇಕು. ಯೋಜನೆಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ಸೂಕ್ತ ರೀತಿಯಲ್ಲಿ ಬಸ್ಸುಗಳ ಹೆಚ್ಚುವರಿ ಟ್ರಿಪ್‌ಗಳ ಕಾರ್ಯಾಚರಣೆ ಮಾಡಬೇಕು ಎಂದು ತಿಳಿಸಿದರು.
