ಯಶ್, ರಿಷಬ್ ಸೇರಿ ಗಣ್ಯರಿಂದ ಮೋದಿ ಭೇಟಿ: ರಾಜಭವನದಲ್ಲಿ ಅನೌಪಚಾರಿಕ ಮಾತುಕತೆ
ಏರೋ ಇಂಡಿಯಾ ಉದ್ಘಾಟನೆಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಾನುವಾರ ರಾತ್ರಿ ರಾಜಭವನದಲ್ಲಿ ಉದ್ಯಮಿಗಳು, ಸಿನಿಮಾ ತಾರೆಯರು ಹಾಗೂ ಖ್ಯಾತ ಕ್ರಿಕೆಟಿಗರು ಭೇಟಿಯಾದರು.
ಬೆಂಗಳೂರು (ಫೆ.13): ಏರೋ ಇಂಡಿಯಾ ಉದ್ಘಾಟನೆಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಾನುವಾರ ರಾತ್ರಿ ರಾಜಭವನದಲ್ಲಿ ಉದ್ಯಮಿಗಳು, ಸಿನಿಮಾ ತಾರೆಯರು ಹಾಗೂ ಖ್ಯಾತ ಕ್ರಿಕೆಟಿಗರು ಭೇಟಿಯಾದರು. ರಾಜಭವನಕ್ಕೆ ಆಗಮಿಸಿದ ಮೋದಿ ಅವರನ್ನು ರಾಜ್ಯಪಾಲರು ಸ್ವಾಗತಿಸಿದರು. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಸಚಿವ ಗೋಪಾಲಯ್ಯ ಉಪಸ್ಥಿತರಿದ್ದರು.
ಕಾಂತಾರಾ ಸಿನಿಮಾ ನಿರ್ಮಾಣ ಕುರಿತು ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, 20 ನಿಮಿಷಗಳ ಕಾಲ ರಾಜ್ಯದ ಪ್ರಸಕ್ತ ಬೆಳವಣಿಗೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಸಿನಿಮಾ ಕ್ಷೇತ್ರದ ಬೆಳವಣಿಗೆಯಲ್ಲಿ ಸರ್ಕಾರಗಳ ಸಹಕಾರಕ್ಕೆ ಬದ್ಧ ಎಂದ ಪ್ರಧಾನಿ, ನಿರೀಕ್ಷೆಗಳೇನಾದರೂ ಇದೆಯಾ ಎಂದು ಕೇಳಿದ್ದಾರೆ. ನಂತರ ಕ್ರೀಡಾ ಕ್ಷೇತ್ರದ ಗಣ್ಯರ ಜೊತೆಗೆ ಮೋದಿ ಮಾತುಕತೆ ನಡೆಸಿದ್ದಾರೆ. ಮೋದಿ ಅವರೊಂದಿಗೆ ಭೋಜನಕೂಟದಲ್ಲಿ ಭಾಗಿಯಾದ ಪಿಎಂಓ ಕಚೇರಿ ಅಧಿಕಾರಿಗಳು ನಂತರ ಪ್ರಧಾನಿ ರಾಜಭವನದ ಸಿಬ್ಬಂದಿ ಜೊತೆಗೆ ಪೋಟೋ ತೆಗೆಸಿಕೊಂಡಿದ್ದಾರೆ.
2008ರಲ್ಲಿ ಬಿಎಸ್‌ವೈಯನ್ನು ಸಿಎಂ ಮಾಡಿದ್ದು ನಾನೇ: ಜನಾರ್ದನ ರೆಡ್ಡಿ
ಸಿನಿಮಾ ತಾರೆಯರಾದ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ರಿಷಬ್ ಶೆಟ್ಟಿ, ಅಶ್ವಿನಿ ಪುನೀತ್‌ರಾಜಕುಮಾರ್, ನಿರ್ಮಾಪಕ ವಿಜಯ್ ಕಿರಗಂದೂರು ಅವರು ಮೋದಿ ಅವರ ಜೊತೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದರೆಂದು ಗೊತ್ತಾಗಿದೆ. ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್, ಕುಂಬ್ಳೆ ದಂಪತಿ, ಜಾವಗಲ್ ಶ್ರೀನಾಥ್, ಮಯಾಂಕ್ ಅಗರ್‌ವಾಲ್, ಮನೀಷ್ ಪಾಂಡೆ, ಉದ್ಯಮ ವಲಯದಿಂದ ನಿತಿನ್ ಕಾಮತ್, ತರುಣ್ ಮೆಹ್ತಾ ಸೇರಿ ಇತರರಿಗೆ ಆಹ್ವಾನವಿತ್ತು. ಭೇಟಿಯ ನಂತರ ಮೋದಿ ಅವರು ರಾಜಭವನದಲ್ಲಿ ವಾಸ್ತವ್ಯ ಹೂಡಿದರು. ಭೋಜನಕೂಟಕ್ಕೆ ಆಹ್ವಾನ ನೀಡಿದ ಬಗ್ಗೆ ಪ್ರಧಾನಿ ಸಮ್ಮುಖದಲ್ಲಿ ಸಿನಿಮಾ ಕ್ಷೇತ್ರದ ಗಣ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.