ರೈತರಾಯ್ತ, ಮೃತ ಸೈನಿಕನ ಕುಟುಂಬವಾಯ್ತು ಈಗ ಮಾಧ್ಯಮಗಳಿಗೂ ಹಣ ಬಾಕಿ ಇರಿಸಿಕೊಂಡ ರಾಜ್ಯ ಸರ್ಕಾರ!

ರೈತರ ಬರ ಪರಿಹಾಣ ಹಣ ಬಿಡುಗಡೆ ಮಾಡಲು ಪರದಾಟ ನಡೆಸುತ್ತಿರುವ ರಾಜ್ಯ ಸರ್ಕಾರ, ಹುತಾತ್ಮ ಸೈನಿಕನಿಗೆ ನೀಡಬೇಕಾದ ಪರಿಹಾರ ಮೊತ್ತವನ್ನು ಬಾಕಿ ಇರಿಸಿಕೊಂಡಿದೆ. ಇದರ ನಡುವೆ ರಾಜ್ಯದ ಮಾಧ್ಯಮಗಳಿಗೆ ನೀಡಿದ ಜಾಹೀರಾತಿಗೆ ನೀಡಬೇಕಾದ ಮೊತ್ತವನ್ನೂ ಸರ್ಕಾರ ಬಾಕಿ ಇರಿಸಿಕೊಂಡಿದೆ.

after farmers State government Put on Hold Advertisement Money for Media san

ಬೆಂಗಳೂರು (ಡಿ.3): ರಾಜ್ಯದ ರೈತರಿಗೆ ನೀಡಬೇಕಾದ ಬರ ಪರಿಹಾರದ ಮೊತ್ತವನ್ನು ಸರ್ಕಾರ ಬಾಕಿ ಇರಿಸಿಕೊಂಡಿದೆ. ಈ ನಿಟ್ಟಿನಲ್ಲಿ ರೈತರು ಮಾಡುತ್ತಿರುವ ಮನವಿಗೆ ಸರ್ಕಾರ ಇನ್ನೂ ಕ್ಯಾರೇ ಎನ್ನುತ್ತಿಲ್ಲ. ಇದರ ನಡುವೆ ರಜೌರಿ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕರ್ನಾಟಕದ ಸೈನಿಕ ಕ್ಯಾಪ್ಟನ್‌ ಎಂವಿ ಪ್ರಾಂಜಲ್‌ ಅವರ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ಘೋಷಣೆ ಮಾಡಿತ್ತು. ಈ ಹಣವನ್ನೂ ಕೂಡ ಸರ್ಕಾರ ಬಿಡುಗಡೆ ಮಾಡಿಲ್ಲ. ಈಗ ರಾಜ್ಯದ ಮಾಧ್ಯಮ ಸಂಸ್ಥೆಗಳಿಗೂ ಸರ್ಕಾರ ಹಣ ಬಾಕಿ ಇರಿಸಿಕೊಂಡಿರುವ ಮಾಹಿತಿ ಬಹಿರಂಗವಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿಯೇ ರಾಜ್ಯದ ವಿವಿಧ ಪತ್ರಿಕೆಗಳು ಹಾಗೂ ಸುದ್ದಿವಾಹಿನಿಗಳಿಗೆ ಸರ್ಕಾರ ಬರೋಬ್ಬರಿ 140 ಕೋಟಿ ರೂಪಾಯಿ ಹಣವನ್ನು ಬಾಕಿ ಇರಿಸಿಕೊಂಡಿದೆ. ಈ ಹಣವನ್ನು ಬಿಡುಗಡೆ ಮಾಡುವಂತೆ ಸ್ವತಃ ಸರ್ಕಾರದ ಕೃಷಿ ಸಚಿವ ಎನ್‌ ಚೆಲುವರಾಯಸ್ವಾಮಿ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಸಿಎಂಗೆ ಬರೆದಿರುವ ಪತ್ರದಲ್ಲಿ , 'ಜಿಲ್ಲಾ, ಪ್ರಾದೇಶಿಕ ಮತ್ತು ರಾಜ್ಯ ಮಟ್ಟದ ಪತ್ರಿಕೆಗಳು, ಸುದ್ದಿವಾಹಿನಿಗಳಿಗೆ ನೀಡಲಾಗಿರುವ ಜಾಹೀರಾತು ಬಾಬ್ತು ಬಾಕಿ 140 ಕೋಟಿ ರೂಪಾಯಿ ಆಗಿದೆ. ಇಷ್ಟು ಬೃಹತ್‌ ಮೊತ್ತದ ಬಾಕಿಯಿಂದಾಗಿ ಮಾಧ್ಯಮ ಸಂಸ್ಥೆಗಳು ತುಂಬಾ ಸಂಕಷ್ಟಕ್ಕೆ ಸಿಲುಕಿವೆ ಎಂದು ಸಂಪಾದಕರು, ಪತ್ರಕರ್ತರ ಸಂಘಟನೆಗಳು ನನ್ನ ಬಳಿ ನಿವೇದಿಸಿಕೊಂಡಿವೆ. ಅಂತೆಯೇ ಆದಷ್ಟು ಜರೂರಾಗಿ ಜಾಹೀರಾತು ಬಾಬ್ತು ಬಾಕಿ ಮೊತ್ತ 140 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿಸಿಕೊಟ್ಟು ಮಾಧ್ಯಮ ಸಂಸ್ಥೆಗಳು ನೆರವಿಗೆ ನಿಲ್ಲುವಂತೆಯೂ ಸಂಘಟನೆಗಳು ಮನವಿ ಮಾಡಿರುತ್ತವೆ.  ಆದ್ದರಿಂದ ವಾರ್ತಾ ಇಲಾಖೆಗೆ ಶೀಘ್ರವೇ 140 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಮಾಧ್ಯಮ ಸಂಸ್ಥೆಗಳ ನೆರವಿಗೆ ನಿಲ್ಲಬೇಕೆಂದು ಕೋರಿದೆ' ಎಂದು ಎನ್‌ ಚೆಲುವರಾಯಸ್ವಾಮಿ ಅಧಿಕೃತ ಲೆಟರ್‌ಹೆಡ್‌ನಿಂದ ಸಿಎಂಗೆ ಪತ್ರ ಬರೆದಿದ್ದಾರೆ.

ಹುತಾತ್ಮ ಸೈನಿಕನಿಗೆ ಪರಿಹಾರ ನೀಡೋಕು ಸರ್ಕಾರದ ಬಳಿ ಹಣವಿಲ್ಲವೇ?

ರೈತರಿಗೆ ಬರ ಪರಿಹಾರ ಕೊಡಲು ದುಡ್ಡಿಲ್ಲ, ಆದ್ರೆ ಶಾಸಕರ ಬರ್ತಡೇಲಿ ಹಣದ ಮಳೆಯನ್ನೇ ಸುರಿಸಲಾಗ್ತಿದೆ!

after farmers State government Put on Hold Advertisement Money for Media san

Latest Videos
Follow Us:
Download App:
  • android
  • ios