Asianet Suvarna News Asianet Suvarna News

ರಾಜ್ಯದಲ್ಲಿ ಮತ್ತೆ ಐದು ದಿನ ಮಳೆ ಸಾಧ್ಯತೆ..!

15 ಜಿಲ್ಲೆಗಳಲ್ಲಿ 5 ದಿನ ಸಾಧಾರಣ ಮಳೆ ಮುನ್ಸೂಚನೆ| ರಾಜ್ಯದಲ್ಲಿ ಚಳಿಯ ವಾತಾವರಣ| ಸರಾಸರಿ 26 ರಿಂದ 19 ಡಿಗ್ರಿಯವರೆಗೂ ದಾಖಲು| ದಾವಣಗೆರೆ ಜಿಲ್ಲೆಯಲ್ಲಿ ಅತಿ ಹೆಚ್ಚು ಚಳಿಯಿದ್ದು, 14 ಡಿಗ್ರಿ ತಾಪಮಾಣ ದಾಖಲು| ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ| 

Again Five days Rain Likely  in Karnataka grg
Author
Bengaluru, First Published Nov 16, 2020, 10:05 AM IST

ಬೆಂಗಳೂರು(ನ.16): ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಕಡೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆ : ದೀಪಾವಳಿ ಸಂಭ್ರಮಕ್ಕೆ ಅಡ್ಡಿ

ರಾಜ್ಯದಲ್ಲಿ ಚಳಿಯ ವಾತಾವರಣವಿದ್ದು, ಸರಾಸರಿ 26 ರಿಂದ 19 ಡಿಗ್ರಿಯವರೆಗೂ ದಾಖಲಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಅತಿ ಹೆಚ್ಚು ಚಳಿಯಿದ್ದು, 14 ಡಿಗ್ರಿ ತಾಪಮಾಣ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
 

Follow Us:
Download App:
  • android
  • ios