ಅಖಂಡ ಶ್ರೀನಿವಾಸಮೂರ್ತಿ ಜೆಡಿಎಸ್ ಸೇರಿ ಲೋಕಸಭೆಗೆ ಸ್ಪರ್ಧೆ?
ಕಾಂಗ್ರೆಸ್ ತೊರೆದು ಬಿಎಸ್‌ಪಿಯಿಂದ ವಿಧಾನಸಭಾ ಚುನಾವಣೆ ಕಣಕ್ಕಿಳಿದಿದ್ದ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಇದೀಗ ಜೆಡಿಎಸ್‌ನತ್ತ ಒಲವು ತೋರಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು (ಅ.11): ಕಾಂಗ್ರೆಸ್ ತೊರೆದು ಬಿಎಸ್‌ಪಿಯಿಂದ ವಿಧಾನಸಭಾ ಚುನಾವಣೆ ಕಣಕ್ಕಿಳಿದಿದ್ದ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಇದೀಗ ಜೆಡಿಎಸ್‌ನತ್ತ ಒಲವು ತೋರಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯಲ್ಲಿ ತಮ್ಮ ಮನೆಗೆ ಬೆಂಕಿ ಬಿದ್ದ ನಂತರದಲ್ಲಿ ಕಾಂಗ್ರೆಸ್ ಜತೆ ಅಂತರ ಕಾಯ್ದುಕೊಂಡಿದ್ದ ಅಖಂಡ ಶ್ರೀನಿವಾಸ್ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದು ಬಿಎಸ್‌ಪಿ ಸೇರ್ಪಡೆಯಾಗಿದ್ದರು. ಬಿಎಸ್‌ಪಿಯಿಂದ ಸ್ಪರ್ಧಿಸಿ ಸೋಲನುಭವಿಸಿದರು. ಇದೀಗ ರಾಜಕೀಯ ನೆಲೆ ಕಂಡುಕೊಳ್ಳಲು ಜೆಡಿಎಸ್ ಸೇರ್ಪಡೆಯಾಗುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ಮೂವರಿಗೋಸ್ಕರ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್ ಮರು ಪರಿಶೀಲನೆ ಮಾಡ್ತಿದೆಯಾ ಸರ್ಕಾರ?
ಜೆಡಿಎಸ್‌ಗೆ ಸೇರ್ಪಡೆಯಾಗಿ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ಹೊಂದಿದ್ದಾರೆ ಎನ್ನಲಾಗಿದೆ. ಆದರೆ, ಇದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಪ್ರಕ್ರಿಯೆ ಅಂತಿಮಗೊಂಡ ಬಳಿಕವೇ ಸ್ಪಷ್ಟತೆ ಪಡೆದುಕೊಳ್ಳಲಿದೆ. ಸದ್ಯ ಕೋಲಾರದಲ್ಲಿ ಬಿಜೆಪಿ ಸಂಸದರಿದ್ದಾರೆ. ಹೀಗಾಗಿ, ಆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಒಪ್ಪಿಕೊಳ್ಳುವುದೇ ಅಥವಾ ಇಲ್ಲವೇ ಎಂಬುದು ಕುತೂಹಲವಿದೆ.
ಜೆಡಿಎಸ್ ಸೇರ್ಪಡೆ ಕುರಿತು ಅಖಂಡ ಶ್ರೀನಿವಾಸ್ ಅವರು ಪಕ್ಷದ ಕೆಲವು ಮುಖಂಡರ ಜತೆ ಮಾತುಕತೆ ಆರಂಭಿಸಿದ್ದಾರೆ. ಆದರೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನಾಗಲಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನಾಗಲಿ ಭೇಟಿ ಮಾಡಿ ಮಾತುಕತೆ ನಡೆಸಿಲ್ಲ. ವರಿಷ್ಠರ ಬಳಿಕ ಮಾತುಕತೆ ಮತ್ತು ಮೈತ್ರಿ ವಿಚಾರವು ಅಂತಿಮಗೊಂಡ ಬಳಿಕವಷ್ಟೇ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎನ್ನಲಾಗಿದೆ.
Karnataka election results 2023: ರಾಜಧಾನಿಯಲ್ಲಿ ಒಬ್ಬ ಬಂಡಾಯ ಅಭ್ಯರ್ಥಿಯೂ ಗೆದ್ದಿಲ್ಲ!