ಕೇರಳದಲ್ಲಿ ಮಾರಣಾಂತಿಕ ನಿಪಾ ವೈರಸ್‌: ಕರ್ನಾಟಕದಲ್ಲೂ ಕಟ್ಟೆಚ್ಚರ

ಕೇರಳದ ಕಲ್ಲಿಕೋಟೆಯಲ್ಲಿ ಇಬ್ಬರಿಗೆ ನಿಪಾ ವೈರಸ್‌ ಸೋಂಕು ದೃಢಪಟ್ಟಿದೆ. ಏಳು ಕಂಟೈನ್‌ಮೆಂಟ್‌ (ಸೋಂಕಿತ ವಲಯ) ಸೃಷ್ಟಿಸಿ ಆ ವ್ಯಾಪ್ತಿಯ ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮುನ್ನೆಚ್ಚರಿಕೆ ವಹಿಸಲು ಬುಧವಾರ ಸಭೆ ನಡೆಸಿದ ಸಚಿವರು, ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ 

Alert on Karnataka Due to Nipah Virus in Kerala grg

ಬೆಂಗಳೂರು(ಸೆ.14): ಕೇರಳದಲ್ಲಿ ಮಾರಣಾಂತಿಕ ನಿಪಾ ವೈರಸ್‌ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲು ಹಾಗೂ ಜಿಲ್ಲಾ, ತಾಲೂಕು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನಿಪಾ ವೈರಸ್‌ ಚಿಕಿತ್ಸೆಗೆ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಕೇರಳದ ಕಲ್ಲಿಕೋಟೆಯಲ್ಲಿ ಇಬ್ಬರಿಗೆ ನಿಪಾ ವೈರಸ್‌ ಸೋಂಕು ದೃಢಪಟ್ಟಿದೆ. ಏಳು ಕಂಟೈನ್‌ಮೆಂಟ್‌ (ಸೋಂಕಿತ ವಲಯ) ಸೃಷ್ಟಿಸಿ ಆ ವ್ಯಾಪ್ತಿಯ ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮುನ್ನೆಚ್ಚರಿಕೆ ವಹಿಸಲು ಬುಧವಾರ ಸಭೆ ನಡೆಸಿದ ಸಚಿವರು, ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಫಾ ವೈರಸ್‌ ಬಾಂಗ್ಲಾದೇಶ ರೂಪಾಂತರ, ತೀರಾ ಅಪಾಯಕಾರಿ: ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌

ದಕ್ಷಿಣ ಕನ್ನಡದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ನಿಫಾ ಶಂಕಿತ ಪ್ರಕರಣಗಳನ್ನು ದಾಖಲಿಸಿಕೊಂಡು ಕೂಡಲೇ ಜಿಲ್ಲಾ ಕಣ್ಗಾವಲು ಕಚೇರಿ, ಘಟಕಕ್ಕೆ ತಿಳಿಸಬೇಕು. ಜತೆಗೆ ಆಮ್ಲಜನಕ, ಅಗತ್ಯ ಔಷಧ ಸಿದ್ಧಪಡಿಸಿಕೊಳ್ಳಬೇಕು. ಜ್ವರದ ಕಣ್ಗಾವಲು ಘಟಕಗಳನ್ನು ಸ್ಥಾಪಿಸಬೇಕು. ನಿಪಾ ರೋಗ ಲಕ್ಷಣಗಳಿಗೆ ಕ್ಷೇತ್ರ ಸಿಬ್ಬಂದಿಗೆ ತರಬೇತಿ ನೀಡಬೇಕು ಎಂದು ಹೇಳಿದ್ದಾರೆ.

ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳಲ್ಲಿ ವರದಿಯಾಗಿರುವ ಯಾವುದೇ ಶಂಕಿತ ಪ್ರಕರಣಗಳ ಮಾದರಿಯನ್ನು ಪುಣೆಯ ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಬೇಕು ಎಂದೂ ಸೂಚನೆ ನೀಡಿದ್ದಾರೆ.

ಕೇರಳಕ್ಕೆ ಮತ್ತೆ ಕಾಲಿಟ್ಟ ನಿಫಾ ವೈರಸ್‌, ಇಬ್ಬರು ಸಾವು ಕಂಡ ಬೆನ್ನಲ್ಲಿಯೇ ಆರೋಗ್ಯ ಇಲಾಖೆ ಅಲರ್ಟ್‌!

ರಾಜ್ಯದಲ್ಲಿ ಮುನ್ನೆಚ್ಚರಿಕೆಗೆ ಸೂಚಿಸಿದ್ದೇನೆ:

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್‌ ಗುಂಡೂರಾವ್‌, ಸೋಂಕಿನ ಬಗ್ಗೆ ಸಮೀಕ್ಷೆ ನಡೆಸಿ ಪೂರ್ವ ಸಿದ್ಧತಾ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ.ರಾಜ್ಯದಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಪ್ರಾಣಿಗಳು, ಬಾವಲಿಗಳು ಹಾಗೂ ಮನುಷ್ಯರಿಂದ ಸೋಂಕು ಹರಡುತ್ತದೆ. ಹೀಗಾಗಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದೇನೆ ಎಂದರು.

ಮಾರ್ಗಸೂಚಿ ಪ್ರಕಟಿಸುತ್ತೀರಾ? ಅಥವಾ ಕೇರಳದವರನ್ನು ತಪಾಸಣೆ ಮಾಡುತ್ತೀರಾ? ಎಂಬ ಪ್ರಶ್ನೆಗೆ, ಸದ್ಯಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲ್ಲ. ಸ್ಥಳೀಯವಾಗಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ ಎಂದರು.

Latest Videos
Follow Us:
Download App:
  • android
  • ios