ಪ್ರಯಾಣಿಕರಿಗೆ ಅಲರ್ಟ್..! ನಾಳೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಶನಿವಾರ ನಮ್ಮ ಮೆಟ್ರೋ ಪರ್ಪಲ್ ಲೈನ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದೆ.
ಬೆಂಗಳೂರು (ಜೂನ್ 24): ವೀಕೆಂಡ್ ಸಂಭ್ರಮಕ್ಕೆ ಎಂಜಿ ರೋಡ್, ಟ್ರಿನಿಟಿ ಕಡೆ ಹೋಗುವವರಿದ್ದೀರಾ? ಹಾಗಿದ್ದಲ್ಲಿ ರಾತ್ರಿಯ ವೇಳೆಗೆ ಮೆಟ್ರೋ ಸೇವೆ ಲಭ್ಯವಿರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಶನಿವಾರ (ಜೂನ್ 25) ರಾತ್ರಿ 9.30ರಿಂದ ಎಂಜಿ ರಸ್ತೆ (MG Road) ಹಾಗೂ ಟ್ರಿನಿಟಿ (Trinity) ಮೆಟ್ರೋ ರೈಲು ನಿಲ್ದಾಣಗಳ (Metro Rail Station) ನಡುವೆ ನೇರಳೆ ಮಾರ್ಗದಲ್ಲಿ (Purple Line) ನಿರ್ವಹಣೆ ಕಾಮಗಾರಿಯನ್ನು ಬಿಎಂಆರ್‌ಸಿಎಲ್ ಕೈಗೊಳ್ಳುತ್ತಿದ್ದು, ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
ಈ ಕಾಮಗಾರಿಯನ್ನು ನಿರ್ವಹಿಸುವ ಸಲುವಾಗಿ ನೇರಳೆ ಮಾರ್ಗದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಶನಿವಾರ ರಾತ್ರಿ 9.30ರಿಂದ ವಾಣಿಜ್ಯ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗುತ್ತಿದೆ ಎಂದು ಹೇಳಿದೆ.ನೇರಳೆ ಮಾರ್ಗದಲ್ಲಿ ಕೊನೆ ಮೆಟ್ರೋ ರೈಲು ಕೆಂಗೇರಿಯಿಂದ ಬೈಯಪ್ಪನಹಳ್ಳಿ ಕಡೆಗೆ ರಾತ್ರಿ 8.40ಕ್ಕೆ ಹೊರಡಲಿದೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿ ಕಡೆ ರಾತ್ರಿ 9.30ಕ್ಕೆ ಮೆಟ್ರೋ ಸೇವೆ ಕೊನೆಯಾಗಲಿದೆ.
ಬೊಮ್ಮಸಂದ್ರದಿಂದ ಹೊಸೂರುವರೆಗೆ ವಿಸ್ತರಣೆಯಾಗುತ್ತಾ ನಮ್ಮ ಮೆಟ್ರೋ?
ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ನಿಂದ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಹೋಗುವ ಕೊನೆಯ ರೈಲು ರಾತ್ರಿ 9.10 ಗಂಟೆಗೆ ಲಭ್ಯವಿರುತ್ತದೆ ಎಂದು ಹೇಳಿದೆ. ಆದಾಗ್ಯೂ ಮೆಟ್ರೋ ರೈಲು ಸೇವೆಯು ಎಂಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ರಾತ್ರಿ 9.30 ರಿಂದ ರಾತ್ರಿ 11 ಗಂಟೆಯವರೆಗೆ ವೇಳಾಪಟ್ಟಿಯ ಪ್ರಕಾರ ಲಭ್ಯವಿರಲಿದೆ. ಭಾನುವಾರ ನೇರಳೆ ಮಾರ್ಗದಲ್ಲಿ ಎಂದಿನಂತೆ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ಆರಂಭವಾಗಲಿದೆ
ಮೆಟ್ರೋ ಹಳಿ ಮೇಲೆ ಬಿದ್ದು ವಿಲ ವಿಲ ಒದ್ದಾಡ್ತಿದ್ದವನ ರಕ್ಷಿಸಿದ ಯುವಕ : ವಿಡಿಯೋ
ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ ಮತ್ತು ವೇಳಾಪಟ್ಟಿಯ ಪ್ರಕಾರ ಸೇವೆ ಲಭ್ಯವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.