ಬೆಂಗಳೂರು(ಜೂ.26): ರಾಜಧಾನಿ ಬೆಂಗಳೂರಲ್ಲಿ ಕೋವಿಡ್‌-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶುಕ್ರವಾರ ನಗರ ವ್ಯಾಪ್ತಿಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಶುಕ್ರವಾರ ಕರೆದಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಎಲ್ಲ ಪಕ್ಷಗಳ ಬೆಂಗಳೂರಿನ ಎಲ್ಲಾ ಶಾಸಕರು, ಸಂಸದರು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಳೆಯಬ್ಬರಕ್ಕೆ ಉಕ್ಕಿದ ವೃಷಭಾವತಿ: ರಸ್ತೆ ಮೇಲೆ 5 ಅಡಿ ಎತ್ತರಕ್ಕೆ ಹರಿದ ನೀರು

ನಗರದಲ್ಲಿ ಕೋವಿಡ್‌-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌, ಜೆಡಿಎಸ್‌ನ ಶಾಸಕರು, ಸಂಸದರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ. ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿದ ಬಳಿಕ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ.

ಒಂದೇ ದಿನ ರಾಜ್ಯದಲ್ಲಿ 442 ಹೊಸ ಸೋಂಕು, 519 ಜನ ಡಿಸ್ಚಾರ್ಜ್..!

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಮಹಾಮಾರಿ ಕೊರೋನಾ ಸೋಂಕು ತಡೆಗಟ್ಟು ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮದ ಬಗ್ಗೆ ಸಚಿವರು ಹಾಗೂ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಿದ್ದೇನೆ. ಶುಕ್ರವಾರ ನಗರದ ಎಲ್ಲಾ ಪಕ್ಷದ ಶಾಸಕರು ಹಾಗೂ ಸಚಿವರೊಂದಿಗೆ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿ ಅಭಿಪ್ರಾಯ ಪಡೆಯಲಾಗುವುದು ಎಂದು ತಿಳಿಸಿದರು.