Asianet Suvarna News Asianet Suvarna News

cauvery water dispute: ಕಾವೇರಿ ಜಲ ವಿವಾದ ಚರ್ಚೆಗೆ ಸರ್ವಪಕ್ಷ ಸಭೆ : ಡಿಕೆಶಿ

ಮಿಳುನಾಡಿಗೆ ನಿತ್ಯ 10,000 ಕ್ಯೂಸೆಕ್ಸ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಪುನರ್‌ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದ್ದಾರೆ.

All party meeting to discuss Cauvery water dispute says DK Shivakumar at bengaluru rav
Author
First Published Aug 18, 2023, 6:25 AM IST

ಬೆಂಗಳೂರು (ಆ.18) :  ತಮಿಳುನಾಡಿಗೆ ನಿತ್ಯ 10,000 ಕ್ಯೂಸೆಕ್ಸ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಪುನರ್‌ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್‌ (DK Shivakumar)ಅವರು, ‘ನಮ್ಮಲ್ಲಿ ಮಳೆ ಕೊರತೆಯಿಂದ ನೀರಿನ ಅಭಾವ ಹೆಚ್ಚಾಗಿದೆ. ಹೀಗಿದ್ದರೂ ನಿತ್ಯ 10 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಪ್ರಾಧಿಕಾರ ತಿಳಿಸಿದೆ. ಆರಂಭದಲ್ಲಿ ನಾವು ತಮಿಳುನಾಡಿಗೆ ನೀರು ಹರಿಸಿದ್ದೇವೆ. ಆದರೂ ಅವರನ್ನು ತೃಪ್ತಿಪಡಿಸಲು ಆಗುತ್ತಿಲ್ಲ. ನಮಗೆ ಕೃಷಿ ಉದ್ದೇಶಕ್ಕಿಂತ ಕುಡಿಯುವ ಉದ್ದೇಶಕ್ಕೆ ನೀರು ಇಟ್ಟುಕೊಳ್ಳುವುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರಕ್ಕೆ ನಿರ್ಧಾರ ಪುನರ್‌ ಪರಿಶೀಲಿಸುವಂತೆ ಮನವಿ ಮಾಡುತ್ತೇವೆ’ ಎಂದು ತಿಳಿಸಿದರು.

News Hour: ಡಿಸಿಎಂ ಡಿಕೆಶಿ ವಿರುದ್ಧ ದೂರು ನೀಡಿದ್ದ ಗುತ್ತಿಗೆದಾರರಿಗೆ ಶಾಕ್

ತಮಿಳುನಾಡಿಗೆ ಕೃಷಿ ಅಗತ್ಯಗಳಿಗೆ ನೀರು ಬೇಕಾಗಿದೆ. ಕಾವೇರಿ ಭಾಗದಲ್ಲಿ ಮಳೆಯ ತೀವ್ರ ಅಭಾವ ಎದುರಾಗಿದೆ. ಹೀಗಾಗಿ ನಮಗೆ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ತಮಿಳುನಾಡು ಸಹ ನಮ್ಮ ಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಜಲವಿವಾದ ಚರ್ಚೆಗೆ ಸರ್ವಪಕ್ಷ ಸಭೆ: ಡಿಕೆಶಿ

ಕಾವೇರಿ ನೀರಿಗೆ ತಮಿಳುನಾಡು ಆಗ್ರಹಿಸುತ್ತಿರುವ ವಿಷಯದ ಬಗ್ಗೆ ಚರ್ಚಿಸಲು ಕುಮಾರಸ್ವಾಮಿ ಅವರು ಸರ್ವ ಪಕ್ಷ ಸಭೆ ಕರೆಯುವ ಬಗ್ಗೆ ಕೇಳಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಕೇವಲ ಕಾವೇರಿ ವಿಚಾರ ಮಾತ್ರವಲ್ಲ, ಮಹದಾಯಿ, ಕೃಷ್ಣ ಸೇರಿದಂತೆ ರಾಜ್ಯದ ಪ್ರಮುಖ ವಿಚಾರಗಳ ಬಗ್ಗೆ ಸರ್ವ ಪಕ್ಷಗಳ ಜತೆ ಚರ್ಚೆ ನಡೆಸುತ್ತೇವೆ. ಈ ಬಗ್ಗೆ ಸಭೆ ಕರೆಯುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಕೂಡ ತಮಿಳುನಾಡಿಗೆ ನೀರು ಬಿಡಬಾರದು ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹಿಂದೆ ಅವರ ಸರ್ಕಾರ ಇದ್ದಾಗಲೂ ಸಂಕಷ್ಟದ ಸಮಯವಿದ್ದರೂ ತಮಿಳುನಾಡಿಗೆ ಹಲವು ಸಲ ನೀರು ಹರಿಸಿದ್ದಾರೆ. ದೇವೇಗೌಡರು ಪ್ರಧಾನಿಯಾಗಿದ್ದಾಗಲೂ ನೀರು ಬಿಡಲಾಗಿತ್ತು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ನೀರು ಬಿಟ್ಟಿರುವ ದಾಖಲೆಗಳಿವೆ. ಈ ವಿಚಾರದಲ್ಲಿ ಅನಗತ್ಯ ರಾಜಕಾರಣ ಮಾಡಬಾರದು. ನಮ್ಮ ಪರಿಸ್ಥಿತಿ ಹದಗೆಟ್ಟಿದ್ದರೂ ತಮಿಳುನಾಡಿನವರು ಆಗ್ರಹ ಮುಂದುವರೆಸಿದ್ದಾರೆ. ಈ ಬಗ್ಗೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದರು.

Follow Us:
Download App:
  • android
  • ios