ಬೆಂಗಳೂರು, (ಮೇ.22): ಲಾಕ್‌ಡೌನ್ 4.0 ಬಹುತೇಕ ಫುಲ್ ಸಡಿಲಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಜನರು ತೆರಳುತ್ತಿದ್ದಾರೆ. ಮತ್ತೊಂದೆಡೆ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವು ಶುರುವಾಗಿದೆ.

ಇದರಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ಒಳಪಡಿಸುವುದು ಕಡ್ಡಾಯಗೊಳಿಸಿದೆ.

ಭಾರತದಲ್ಲಿ ಕೊರೋನಾ ಹರಡಲು ಬಿಡುವುದೇ ಮಾರ್ಗವೇ?

ರೈಲು ಮತ್ತು ಬಸ್ಸುಗಳಲ್ಲಿ ಸಂಚಾರ ಮಾಡುವ ಎಲ್ಲ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲು ತೀರ್ಮಾನಿಸಲಾಗಿದ್ದು, ತನಿಖಾ ಠಾಣೆಗಳ ಬದಲಿಗೆ ಆರೋಗ್ಯ ತಪಾಸಣಾ ಕೇಂದ್ರಗಳು ಆಯಕಟ್ಟಿನ ಜಾಗದಲ್ಲಿ ಇರಲಿವೆ.

ಜಿಲ್ಲೆಯಿಂದ ಜಿಲ್ಲೆಗೆ ಓಡಾಡುವ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಮತ್ತು ಸಾರ್ವಜನಿಕ ವಾಹನಗಳಾದ ಬಸ್ಸು, ರೈಲುಗಳಲ್ಲಿ ಓಡಾಡುವ ಪ್ರಯಾಣಿಕರಿಗೆ ಕಡ್ಡಾಯ ಆರೋಗ್ಯ ತಪಾಸಣೆ.

ಒಂದು ವೇಳೆ ಕೊರೋನಾ ರೋಗ ಲಕ್ಷಣಗಳು ಕಂಡು ಬಂದರೆ ಕೂಡಲೇ ಹತ್ತಿರದ ಆರೋಗ್ಯ ತಪಾಸಣೆ ಕೇಂದ್ರಕ್ಕೆ ದಾಖಲು ಮಾಡಲಾಗುವುದು ಎಂದು  ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ಮೂಲಕ ತಿಳಿಸಿದೆ.