Asianet Suvarna News Asianet Suvarna News

ಜಾತಿ ನಿಂದನೆ ಆರೋಪ: 'ನನ್ನ ಮೇಲೆ ಯಾಕಿಷ್ಟುದ್ವೇಷ? ಕ್ಷಮೆ ಕೇಳಿದ್ದೇನೆ' -ಉಪೇಂದ್ರ

ತಮ್ಮ ಹೇಳಿಕೆ ಪರ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಆರಂಭವಾಗಿರುವ ನಡುವೆಯೇ, ನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿದ್ದಾರೆ.

Allegation of caste abuse Actor upendra apologized at bengaluru rav
Author
First Published Aug 14, 2023, 6:07 AM IST | Last Updated Aug 14, 2023, 6:07 AM IST

ಬೆಂಗಳೂರು (ಆ.14) :  ತಮ್ಮ ಹೇಳಿಕೆ ಪರ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಆರಂಭವಾಗಿರುವ ನಡುವೆಯೇ, ನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿದ್ದಾರೆ.

‘ಫೇಸ್‌ಬುಕ್‌ ಮತ್ತು ಇನ್ಸ್‌ಸ್ಟಾಗ್ರಾಮ್‌(Facebook instagram) ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದೆ. ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್‌ ವಿಡಿಯೋವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್‌ ಮಾಡಿರುತ್ತೇನೆ ಮತ್ತು ಈ ಮಾತಿಗೆ ಕ್ಷಮೆಯಿರಲಿ’ ಎಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದು ಪೋಸ್ಟ್‌ ಮಾಡಿದ್ದಾರೆ.

ಪರಿಶಿಷ್ಟ ಜಾತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ನಟ ಉಪೇಂದ್ರ ವಿರುದ್ಧ ದೂರು ದಾಖಲು

ಯಾಕೆ ಇಷ್ಟೊಂದು ದ್ವೇಷ:

ಮತ್ತೊಂದು ಪೋಸ್ಟ್‌ನಲ್ಲಿ ‘ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ದ್ವೇಷ?’ ಎಂದು ಉಪೇಂದ್ರ ಪ್ರಶ್ನಿಸಿದ್ದಾರೆ.

'ಊರು ಎಂದ್ಮೇಲೆ ಹೊಲೆಗೇರಿ ಇರುತ್ತೆ' ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿದ ಬುದ್ಧಿವಂತ ಉಪೇಂದ್ರ

Latest Videos
Follow Us:
Download App:
  • android
  • ios