Asianet Suvarna News Asianet Suvarna News

ಚುನಾವಣಾ ಅಕ್ರಮ ಆರೋಪ: ಎಚ್‌ಡಿ ರೇವಣ್ಣಗೆ ಹೈಕೋರ್ಟ್‌ ಸಮನ್ಸ್‌

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಹಿನ್ನೆಲೆಯಲ್ಲಿ ಎಚ್‌.ಡಿ. ರೇವಣ್ಣ ಅವರು ಹೊಳೆನರಸೀಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರೇವಣ್ಣ ಅವರಿಗೆ ಹೈಕೋರ್ಟ್‌ ಮತ್ತೆ ಸಮನ್ಸ್‌ ಜಾರಿ ಮಾಡಿದೆ.

Allegation of election irregularities: High Court summons to HD Revanna at Hassan rav
Author
First Published Oct 31, 2023, 4:24 AM IST

ಬೆಂಗಳೂರು (ಅ.31) :  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಹಿನ್ನೆಲೆಯಲ್ಲಿ ಎಚ್‌.ಡಿ. ರೇವಣ್ಣ ಅವರು ಹೊಳೆನರಸೀಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರೇವಣ್ಣ ಅವರಿಗೆ ಹೈಕೋರ್ಟ್‌ ಮತ್ತೆ ಸಮನ್ಸ್‌ ಜಾರಿ ಮಾಡಿದೆ.

ಈ ಕುರಿತಂತೆ ಪರಾಜಿತ ಅಭ್ಯರ್ಥಿ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಪೀಠ ಈ ಆದೇಶ ಮಾಡಿದೆ.

 

ದಾಖಲೆ ನೋಡಿದರೆ ರಾಮನಗರಕ್ಕೆ ಎಚ್‌ಡಿಕೆ ಕೊಡುಗೆ ಗೊತ್ತಾಗುತ್ತೆ: ಎಚ್‌.ಡಿ.ರೇವಣ್ಣ

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರು, ಅರ್ಜಿ ಸಂಬಂಧ ಶಾಸಕ ಹೆಚ್. ಡಿ.ರೇವಣ್ಣ ಅವರಿಗೆ ಹೈಕೋರ್ಟ್‌ ಸಮನ್ಸ್ ನೀಡಿದೆ. ಆದರೆ, ಈವರೆಗೂ ಅವರಿಗೆ ಸಮನ್ಸ್‌ ಜಾರಿಯಾಗಿಲ್ಲ. ಆದ್ದರಿಂದ ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿ ಮಾಡಲು ಆದೇಶಿಸಬೇಕು ಎಂದು ಕೋರಿದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಎಚ್‌.ಡಿ. ರೇವಣ್ಣ ಸೇರಿದಂತೆ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಮತ್ತೆ ಸಮನ್ಸ್‌ ಜಾರಿಗೊಳಿಸಿ ವಿಚಾರಣೆಯನ್ನು ನ.29ಕ್ಕೆ ಮುಂದೂಡಿತು.

 

ರೇವಣ್ಣ ಆಪ್ತನ ಕಿಡ್ನಾಪ್‌ ಕೇಸಲ್ಲಿ ಇನ್ಸ್‌ಪೆಕ್ಟರ್‌ ಅರೆಸ್ಟ್‌

ರೇವಣ್ಣ ಮೇಲೆ ಏನು ಆರೋಪ?:

ಚುನಾವಣೆ ಸಂದರ್ಭದಲ್ಲಿ ಎಚ್‌.ಡಿ.ರೇವಣ್ಣ ಅವರ ಬೆಂಬಲಿಗರು ಅಣ್ಣೆಹಳ್ಳಿಯಲ್ಲಿ ಮತದಾರರಿಗೆ ಎರಡು ಕೋಳಿ ಮತ್ತು ಎರಡು ಸಾವಿರ ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ. ಶಾಂತಿಗ್ರಾಮದ ಬಳಿ ಜನರಿಗೆ ದುಡ್ಡು, ಕೋಳಿಯ ಆಮಿಷ ಒಡ್ಡುತ್ತಿದ್ದುದನ್ನು ತಡೆಯಲು ಹೋದಾಗ ರೇವಣ್ಣ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. 30 ಮಂದಿ ವಿರುದ್ಧ ದೂರು ಪ್ರಕರಣ ದಾಖಲಿಸಲಾಗಿದೆ. ನಾಮಪತ್ರದಲ್ಲಿ ತಮ್ಮ ಆಸ್ತಿ ವಿವರಗಳ ಬಗ್ಗೆ ರೇವಣ್ಣ ಸಂಪೂರ್ಣ ಮಾಹಿತಿ ನೀಡಿಲ್ಲ. ಅವರ ಪತ್ನಿ ಭವಾನಿ ಅವರ ಆಸ್ತಿಯ ವಿವರಗಳೂ ಸುಳ್ಳಿನಿಂದ ಕೂಡಿವೆ. ರೇವಣ್ಣ ಭಾರಿ ಅಕ್ರಮ ಎಸಗಿ ಜಯಗಳಿಸಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿ ಸಂಬಂಧ ರೇವಣ್ಣಗೆ ಹೈಕೋರ್ಟ್‌ ಈ ಹಿಂದೆ ಸಮನ್ಸ್‌ ಜಾರಿಗೊಳಿಸಿತ್ತು.

Follow Us:
Download App:
  • android
  • ios