ಭಾರತ್‌ ಜೋಡೋ ಯಾತ್ರೆಯಲ್ಲಿ ‘ಕೆಜಿಎಫ್‌ 2’ ಚಿತ್ರದ ಸಂಗೀತ ಬಳಕೆ ಮಾಡಿರುವ ಆರೋಪ ಸಂಬಂಧ ನಡೆಯುತ್ತಿದ್ದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

ಬೆಂಗಳೂರು (ಡಿ.17): ಭಾರತ್‌ ಜೋಡೋ ಯಾತ್ರೆಯಲ್ಲಿ ‘ಕೆಜಿಎಫ್‌ 2’ ಚಿತ್ರದ ಸಂಗೀತ ಬಳಕೆ ಮಾಡಿರುವ ಆರೋಪ ಸಂಬಂಧ ನಡೆಯುತ್ತಿದ್ದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎಂಆರ್‌ಟಿ ಮ್ಯೂಸಿಕ್‌ ಸಂಸ್ಥೆ ದಾಖಲಿಸಿದ್ದ ಎಫ್‌ಐಆರ್‌ ರದ್ದು ಕೋರಿ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಪಕ್ಷದ ಸಂವಹನಾ ಮತ್ತು ಪ್ರಚಾರ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ್‌, ಸಾಮಾಜಿಕ ಜಾಲಾತಾಣಗಳ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರೀನೇತ್‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಪೀಠ, ಪ್ರಕರಣ ಸಂಬಂಧ ನಡೆಯುತ್ತಿರುವ ತನಿಖೆಗೆ ಮುಂದಿನ ವಿಚಾರಣೆವರೆಗೂ ಮಧ್ಯಂತರ ತಡೆ ನೀಡಿ ಆದೇಶಿಸಿದ್ದಾರೆ.

ಭಾರತ್ ಜೋಡೋ ಪಾದಯಾತ್ರೆ ವೇಳೆ ಕೆಜಿಎಫ್-2 ಚಿತ್ರದ 'ಸುಲ್ತಾನ್' ಹಾಡನ್ನು ಅನಧಿಕೃತವಾಗಿ ಬಳಸಿಕೊಂಡಿದ್ದರು. ಈ ಕಾರಣಕ್ಕೆ ಸುಲ್ತಾನ್ ಹಾಡಿನ ಹಕ್ಕನ್ನು ಹೊಂದಿರುವ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಹಕ್ಕು ಸ್ವಾಮ್ಯ ಉಲ್ಲಂಘಿಸಿದ್ದಕ್ಕೆ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಭಾರತ್ ಜೋಡೋ ಯಾತ್ರೆ ಟ್ವೀಟರ್ ಖಾತೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ನ್ಯಾಯಾಲಯ ಟ್ವೀಟರ್‌ಗೆ ನಿರ್ದೇಶನ ನೀಡಿತ್ತು.

ಭಾರತ್ ಜೋಡೋ ಯಾತ್ರೆಗೆ KGF ಹಾಡು ಬಳಕೆ: ರಾಹುಲ್ ಗಾಂಧಿ ವಿರುದ್ದ ನ್ಯಾಯಾಂಗ ನಿಂದನೆ‌ ಅರ್ಜಿ