ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತಾತ್ಕಲಿಕ ರಿಲೀಫ್ ಸಿಕ್ಕಿದೆ.

ಬೆಂಗಳೂರು, (ನ.27): ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ.

Add Asianetnews Kannada as a Preferred SourcegooglePreferred

ಡಿಸೆಂಬರ್ 4ರ ತನಕ ಯಾವುದೇ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ.

ರೆಡ್ಡಿ ಕೇಸ್ : ತನಿಖಾಧಿಕಾರಿಗಳ ವಿರುದ್ಧವೇ ದಾವೇ - ಸಿಐಡಿ ತನಿಖೆ

ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ರೆಡ್ಡಿ ಆಪ್ತ ಅಲಿಖಾನ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ಕೋರ್ಟ್ ಡಿಸೆಂಬರ್ 4ರ ವರೆಗೆ ಯಾವುದೇ ರೀತಿಯಾಗಿ ಕ್ರಮ ಜರುಗಿಸದಂತೆ ಸಿಸಿಬಿಗೆ ಸೂಚಿಸಿದೆ.

ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣದ ಡೀಲ್ ಆರೋಪದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಸಿಸಿಬಿ ಈ ಪ್ರರಕರಣದ ತನಿಖೆ ನಡೆಸುತ್ತಿದೆ.