Asianet Suvarna News Asianet Suvarna News

ಅರುಣ್ ಯೋಗಿರಾಜ್‌ಗೆ ಅಮೇರಿಕ ವೀಸಾ ರಿಜೆಕ್ಟ್, ಕೇಂದ್ರ ಸಚಿವರಿಂದ ಮಾಹಿತಿ ಕೇಳುತ್ತೇನೆಂದ ಸಂಸದ ಯದುವೀರ್ ಒಡೆಯರ್

ಅಯೋಧ್ಯೆಯ ಶ್ರೀರಾಮ ಮಂದಿರದ ರಾಮಲಲ್ಲಾ ವಿಗ್ರಹ ಕೆತ್ತನೆ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಅವರಿಗೆ ಅಮೇರಿಕ ವೀಸಾ ನೀಡಲಿ ನಿರಾಕರಣೆ ಮಾಡಿರುವುದಕ್ಕೆ ಕಾರಣವೇನೆಂದು ಗೊತ್ತಿಲ್ಲ. ಕೇಂದ್ರದಿಂದ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದರು.

America visa denied for Ramallah architect Arun Yogiraj and MP Yaduveer Wadiyar Outraged sat
Author
First Published Aug 14, 2024, 7:36 PM IST | Last Updated Aug 14, 2024, 7:36 PM IST

ಮೈಸೂರು (ಆ.14): ಅಯೋಧ್ಯೆಯ ಶ್ರೀರಾಮ ಮಂದಿರದ ರಾಮಲಲ್ಲಾ ವಿಗ್ರಹದ ಕೆತ್ತನೆಯ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಅವರು ನಮ್ಮ ದೇಶದ ಆಸ್ತಿಯಾಗಿದ್ದಾರೆ. ಆದರೆ, ಅವರಿಗೆ ಅಮೇರಿಕ ವೀಸಾ ನಿರಾಕರಣೆ ಮಾಡಿರುವುದಕ್ಕೆ ಕಾರಣವೇನೆಂದು ಗೊತ್ತಿಲ್ಲ. ಕೂಡಲೇ ಕೇಂದ್ರ ಸಚಿವರೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ಮೈಸೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮೇರಿಕಾಗೆ ಹೋಗಲು ವೀಸಾ ನಿರಾಕರಣೆ ಆಗಿರುವ ಬಗ್ಗೆ ಈಗಾಗಲೇ ಅರುಣ್ ಜೊತೆ ಮಾತನಾಡಿದ್ದೇನೆ. ಯಾವ ಕಾರಣಕ್ಕೆ ವೀಸಾ ರಿಜೆಕ್ಟ್ ಆಗಿದೆ ಎಂಬುದು ಗೊತ್ತಿಲ್ಲ. ಅರುಣ್ ಯೋಗಿರಾಜ್ ನಮ್ಮ ದೇಶದ ಆಸ್ತಿ. ಶಂಕರಾಚಾರ್ಯ, ರಾಮಲಲ್ಲ ಮೂರ್ತಿ ಕೆತ್ತನೆ ಮಾಡಿ ಇಡೀ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹಿಂದು ಅನ್ನೋ ಕಾರಣಕ್ಕೆ ವೀಸಾ ರೆಜೆಕ್ಟ್ ಆಗಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ. ಈ ಬಗ್ಗೆ ಕೇಂದ್ರ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಮಾಹಿತಿ ನೀಡಿದರು.

ಅಯೋಧ್ಯೆ ಬಾಲರಾಮನ ವಿಗ್ರಹದ ಶಿಲ್ಪಿ ಅರುಣ್ ಯೋಗಿರಾಜ್‌ಗೆ ವೀಸಾ ನಿರಾಕರಿಸಿದ ಅಮೇರಿಕ!

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮಾಡುವ ವಿಚಾರದ ಬಗ್ಗೆ ಮಾತನಾಡಿ, ಯಾವುದೇ ಕಾರಣಕ್ಕೂ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲಬಾರದು. ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಗೆದ್ದಿರುವ ಕಾಂಗ್ರೆಸ್ ಎಲ್ಲ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಬೇಕು. ಜನರು ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್‌ಗೆ ಅಧಿಕಾರ ನೀಡಿರುವಾಗ ಯೋಜನೆಗಳನ್ನು ನಿಲ್ಲಿಸಬಾರದು ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದರು. 

ನಾಳೆ ಕಾವೇರಿ ಮಾತೆಗೆ‌ ಯಧುವೀರ್ ಒಡೆಯರ್ ಬಾಗಿನ: ಕನ್ನಡ ನಾಡಿನ ಜೀವನದಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರು ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯ ಭರ್ತಿಯಾಗಿದ್ದು, ಸಂಸದರಾಗಿ ಇದೇ ಮೊದಲ ಬಾರಿಗೆ ಕಾವೇರಿಗೆ ಬಾಗಿನ ಸಮರ್ಪಣೆ ಮಾಡುತ್ತಿದ್ದಾರೆ. ನಾಳೆ ಗುರುವಾರ (ಆ.15ರಂದು) ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳನ್ನು ನೆರವೇರಿಸಿ ನಂತರ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಲಿದ್ದಾರೆ. ಇನ್ನು ಯದುವೀರ್ ಕೃಷ್ಣದತ್ತು ಚಾಮರಾಜ ಒಡೆಯರ್ ಅವರು ಮೊದಲ ಬಾರಿಗೆ ಸಂಸದರಾಗಿ ಹಾಗೂ ಮೈಸೂರು ರಾಜವಂಶಸ್ಥರಾಗಿಯೂ ಬಾಗಿನ ಅರ್ಪಣೆ ಮಾಡುತ್ತಿರುವುದು ವಿಶೇಷವಾಗಿದೆ.

ಸ್ವಾತಂತ್ರ್ಯ ದಿನಾಚರಣೆ: ಅಂಬೇಡ್ಕರ್ ಫೋಟೋ ಕಡ್ಡಾಯ, ಸಚಿವರ ಸೂಚನೆ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ತೆರಳಿ ಬೆಳಗ್ಗೆ 10.30ಕ್ಕೆ ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಬಿಜೆಪಿ ಮುಖಂಡರೊಂದಿಗೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಖ್ಯಾತ ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಜಲಾಶಯದಲ್ಲಿಯೂ ಅಗತ್ಯ ಸಿದ್ಧತೆ ಮಾಡಕೊಳ್ಳಲಾಗಿದೆ.

Latest Videos
Follow Us:
Download App:
  • android
  • ios