ಕುಕ್ಕೆಯಲ್ಲಿ ಆಶ್ಲೇಷ ಬಲಿ ಸೇವೆ ಸಲ್ಲಿಸಿದ ಅಮಿತ್‌ ಶಾ ಪುತ್ರ!

ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹಮಂತ್ರಿ ಅಮಿತ್‌ ಷಾ ಅವರ ಪುತ್ರ ಜಯ್‌ ಷಾ ಭಾನುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು.

Amit Shahs son Jay Shah visits Kukke Subramanya temple gvd

ಸುಬ್ರಹ್ಮಣ್ಯ (ಜು.31): ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹಮಂತ್ರಿ ಅಮಿತ್‌ ಷಾ ಅವರ ಪುತ್ರ ಜಯ್‌ ಷಾ ಭಾನುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಇವರೊಂದಿಗೆ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು. ದೇವಳದ ಒಳಗೆ ಮೊದಲು ಸಂಕಲ್ಪ ನೆರವೇರಿಸಿದ ಜಯ್‌ ಶಾ ಕುಟುಂಬ ಬಳಿಕ ಆಶ್ಲೇಷ ಬಲಿ ಸೇವೆ ನೆರವೇರಿಸಿ, ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಜಯ್‌ ಷಾ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. 

ಬಳಿಕ ಹೊಸಳಿಗಮ್ಮನ ದರುಶನ ಪಡೆದ ಅವರು ಪೂಜೆ ಸಲ್ಲಿಸಿದರು. ಷಾ ಕುಟುಂಬಸ್ಥರು ಪ್ರಸಾದ ಭೋಜನ ಸ್ವೀಕರಿಸಿದರು. ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ತಂದೆ, ಕೇಂದ್ರ ಗೃಹ ಮಂತ್ರಿ ಅಮಿತ್‌ ಷಾ ಹೆಸರಿನಲ್ಲಿ ದೇಣಿಗೆ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದ್ಲಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಜತೆಗಿದ್ದರು.

ವ್ಯಸನಮುಕ್ತರು ಸತ್ಪ್ರಜೆಗಳಾಗಿ ಬದುಕಬೇಕು: ಯು.ಟಿ.ಖಾದರ್‌

ಗೌರವಾರ್ಪಣೆ: ದೇವಸ್ಥಾನದ ಆಡಳಿತ ಕಚೇರಿಗೆ ಭೇಟಿ ನೀಡಿದ ಜಯ್‌ ಷಾ ಅವರನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್‌ ಮಡ್ತಿಲ, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ರಾವ್‌, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶೋಭಾ ಗಿರಿಧರ್‌, ಶಿಷ್ಟಾಚಾರ ವಿಭಾಗದ ಪ್ರಮೋದ್‌ ಕುಮಾರ್‌ ಎಸ್‌. ಹಾಗೂ ಮನೋಜ್‌ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಠಾಣಾಧಿಕಾರಿ ಮಂಜುನಾಥ್‌ ಟಿ. ಸೂಕ್ತ ಬಂದೋಬಸ್‌್ತ ಮಾಡಿದ್ದರು.

ಹಣ ಹಾಗೂ ಹೆಣದ ಮೇಲೆ ಕಾಂಗ್ರೆಸ್‌ ರಾಜಕಾರಣ: ಎನ್‌.ರವಿಕುಮಾರ್‌

ದೇವರ ದರುಶನದಿಂದ ಅತೀವ ಸಂತಸ: ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ದೇವರ ದರುಶನ ಪಡೆದದ್ದು ಅತೀವ ಸಂತಸ ತಂದಿದೆ. ದೇವರ ದರ್ಶನ ಮಾಡಲು, ಸೇವೆ ನೆರವೇರಿಸಲು ಉತ್ತಮವಾದ ವ್ಯವಸ್ಥೆ ಮಾಡಿಕೊಟ್ಟದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ, ಸದಸ್ಯರಿಗೆ ಮತ್ತು ದೇವಳದ ಆಡಳಿತ ಮಂಡಳಿಗೆ ತುಂಬು ಹೃದಯದ ಧನ್ಯವಾದಗಳು. ಮುಂದೆ ಅನೇಕ ಬಾರಿ ಕ್ಷೇತ್ರಕ್ಕೆ ಆಗಮಿಸಿ ದೇವರ ದರುಶನ ಪಡೆಯುವ ಕನಸು ಹೊಂದಿದ್ದೇನೆ. ಇದನ್ನು ದೇವರು ನೆರವೇರಿಸುತ್ತಾರೆ ಎಂಬ ನಂಬಿಕೆ ನನ್ನದು ಎಂದು ಜಯ್‌ ಷಾ ಹೇಳಿದರು.

Latest Videos
Follow Us:
Download App:
  • android
  • ios