ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಿದರೆ ಅನುಕೂಲ: ಗೃಹ ಸಚಿವ ಪರಮೇಶ್ವರ

ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡುವ ಯೋಜನೆಯ ಭಾಗವಾಗಿ ತುಮಕೂರಿನ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು, ತುಮಕೂರಿನ ಬಳಿ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾವನೆಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮುಂದಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು ಚಿತ್ರದುರ್ಗ ನಡುವೆ ವಿಮಾನ ನಿಲ್ದಾಣ ನಿರ್ಮಿಸುವುದಿಲ್ಲ ಎಂಬ ಸರ್ಕಾರದ ಹಿಂದಿನ ನಿರ್ಧಾರಕ್ಕೆ ವಿರೋಧ ವ್ಯಕ್ತವಾ ಗಿದೆ.

An airport in Tumakuru will be beneficial Home Minister Parameshwara sat

ಬೆಂಗಳೂರು (ಅ.18): ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡುವ ಯೋಜನೆಯ ಭಾಗವಾಗಿ ತುಮಕೂರಿನ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು, ತುಮಕೂರಿನ ಬಳಿ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾವನೆಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮುಂದಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು ಚಿತ್ರದುರ್ಗ ನಡುವೆ ವಿಮಾನ ನಿಲ್ದಾಣ ನಿರ್ಮಿಸುವುದಿಲ್ಲ ಎಂಬ ಸರ್ಕಾರದ ಹಿಂದಿನ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್‌ಶಿಪ್ ಬರುತ್ತಿದೆ. ಎಚ್‌ಎಎಲ್ ಹೆಲಿಕ್ಯಾಪ್ಟರ್ ಫ್ಯಾಕ್ಟರಿ ಕೆಲಸ ಆರಂಭಿಸಿದೆ. ಇನ್ನೂ ಹಲವು ದೊಡ್ಡ ಕೈಗಾರಿಕೆಗಲಕು ಬರಲಿವೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ವಿಮಾನ ನಿಲ್ದಾಣ ಮಾಡಿದರೆ ಉತ್ತಮ ಎಂಬುದನ್ನು ತಿಳಿಸಲಾಗಿದೆ‌ ಎಂದರು.

ಇದನ್ನೂ ಓದಿ: ಕೇಂದ್ರ ಸಚಿವರ ಸಹೋದರ ಗೋಪಾಲ್ ಜೋಷಿ ತಲೆಮರೆಸಿಕೊಂಡಿದ್ದಾರೆ; ಗೃಹ ಸಚಿವ ಪರಮೇಶ್ವರ

ಮುಂದಿನ ದಿನಗಳಲ್ಲಿ ತುಮಕೂರು ಅಭಿವೃದ್ಧಿಗೆ ಬೇರೆಬೇರೆ ಹೊಸ ಯೋಜನೆಗಳನ್ನು ಇಟ್ಟುಕೊಳ್ಳಲಾಗಿದೆ. ತುಮಕೂರು ಬೆಂಗಳೂರಿನ  ಒಂದು ಭಾಗವಾಗಿ ಬೆಳೆಯುತ್ತಿದ್ದು ಗ್ರೇಟರ್ ಬೆಂಗಳೂರು ಎಂದು ಪರಿಗಣಿಸುವಂತೆ ಕೇಳಿಕೊಳ್ಳಲಾಗಿದೆ.‌ ನೆಲಮಂಗಲ, ದಾಬಸ್‌ಪೇಟೆವರೆಗೆ ಬೆಂಗಳೂರು ಬೆಳೆದಿದೆ. ತುಮಕೂರುವರೆಗೆ ಮೆಟ್ರೋ ರೈಲು ವಿಸ್ತರಣೆಗೂ ಪ್ರಸ್ತಾವನೆ ಸಲ್ಲಿಸಲಾಗಿದೆ.‌ ತುಮಕೂರನ್ನು ಗ್ರೇಟರ್ ಬೆಂಗಳೂರು ಎಂದು ಕರೆಯಬಹುದು. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು‌ ಎಂದು ತಿಳಿಸಿದರು.

ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರು ಭೇಟಿ ನೀಡಿದ್ದಾರೆ. ಇವತ್ತು ವರದಿ ನೀಡಲಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಆಂತರಿಕವಾಗಿ ಗಂಭೀರ ವಿಚಾರ ಆಗಿರುವುದರಿಂದ ಭೇಟಿ ನೀಡಿ ವರದಿ ನೀಡುವಂತೆ‌ ರಾಜ್ಯ ಬಂಧಿಖಾನೆ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದರು.

ಇದನ್ನೂ ಓದಿ: ಸೂಕ್ತ ದಾಖಲೆ ನೀಡದ ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ

ಜಾತಿಗಣತಿ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ ಅವರು, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಅವರನ್ನ ಯಾವ ವಿಚಾರಕ್ಕೆ ಭೇಟಿ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಸರ್ಕಾರವು 160 ಕೋಟಿ ರೂ. ಖರ್ಚು ಮಾಡಿ ಜಾತಿಗಣತಿ ಸಮೀಕ್ಷೆ ನಡೆಸಿದೆ. ಅಷ್ಟೊಂದು ಹಣ ಖರ್ಚು ಮಾಡಿದ ಮೇಲೆ ಜನಗಳಿಗೆ ಗೊತ್ತಾಗಬೇಕಲ್ಲವೇ? ಮುಂದೆ ಏನು ಮಾಡುತ್ತೇವೆ ಎಂಬುದು ಎರಡನೇ ಪ್ರಶ್ನೆ. ಯಾವ ಸಮುದಾಯಗಳು ಎಷ್ಟೆಷ್ಟು ಸಂಖ್ಯೆಯಲ್ಲಿದ್ದಾರೆ ಎಂದು ಜನಸಮುದಾಯಕ್ಕೆ ತಿಳಿಸುವ ವರದಿಯನ್ನು ಸಚಿವ ಸಂಪುಟದ ಮುಂದೆ ತರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ‌. ಯಾವುದೇ ವಿಚಾರವನ್ನು ನೂರಕ್ಕೆ ನೂರರಷ್ಟು ಜನ ಒಪ್ಪಿಕೊಳ್ಳುವುದಿಲ್ಲ. ಪರ-ವಿರೋಧ ಇದ್ದೇ ಇರುತ್ತಾರೆ ಎಂದು ಹೇಳಿದರು.

Latest Videos
Follow Us:
Download App:
  • android
  • ios