Asianet Suvarna News Asianet Suvarna News

Bengaluru Rain:ಮಹಾಮಳೆಗೆ ಸಿಲುಕಿ ಯುವತಿ ಸಾವು: ಪ್ರವಾಸಕ್ಕೆ ಬಂದವಳು ದುರಂತ ಅಂತ್ಯ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ವೇಳೆ ಸುರಿದ ಭಾರಿ ಮಳೆಗೆ ಒಬ್ಬ ಮಹಿಳೆ ಬಲಿಯಾಗಿರುವ ದುರ್ಘಟನೆ ನಡೆದಿದೆ.

Andhra Pradesh young woman dies in heavy rains in Bengaluru sat
Author
First Published May 21, 2023, 5:00 PM IST

ಬೆಂಗಳೂರು (ಮೇ 21): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಸಂಜೆ ವೇಳೆ ಸುರಿದ ಭಾರಿ ಮಳೆಗೆ ಒಬ್ಬ ಮಹಿಳೆ ಬಲಿಯಾಗಿರುವ ದುರ್ಘಟನೆ ನಡೆದಿದೆ. ವಿಧಾನಸೌಧದಿಂದ 200 ಮೀಟರ್ ದೂರದಲ್ಲೇ ಇರುವ ಕೆ.ಆರ್. ವೃತ್ತದ ಬಳಿಯಿರುವ ಅಂಡರ್‌ಪಾಸ್‌ನಲ್ಲಿ ನಿಂತ ನೀರಿನಲ್ಲಿ ಕಾರು ಸಿಲುಕಿಕೊಂಡು ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದರು. ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಯುವತಿಯನ್ನು ಭಾನುರೇಖಾ (22) ಎಂದು ಗುರುತಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ 6 ಜನರ ಕುಟುಂಬ ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು. ಬೆಂಗಳೂರಿನ ರಸ್ತೆಗಳ ಪರಿಚಯ ಇಲ್ಲದ್ದರಿಂದ ಮಳೆಯ ನಡುವೆಯೇ ಗೂಗಲ್‌ ಮ್ಯಾಪ್‌ ತೋರಿಸಿದಂತೆ ಅಂಡರ್‌ಪಾಸ್‌ನಲ್ಲಿ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ. ಆದರೆ, ಅಂಡರ್‌ಪಾಸ್‌ನಲ್ಲಿ ಮಳೆಯ ನೀರು ತುಂಬಿಕೊಂಡಿದ್ದು, ಅಲ್ಲಿ ಹೋದ ಕಾರು ಸಂಪೂರ್ಣ ಮುಳುಗಿದೆ. ಅವರನ್ನು ಸ್ಥಳೀಯರು ರಕ್ಷಣೆ ಮಾಡಲು ಮುಂದಾಗಿದ್ದಾರೆ.

Bengaluru Rain: ಅಕಾಲಿಕ ಆಲಿಕಲ್ಲು ಮಳೆಗೆ ತತ್ತರಿಸಿದ ಜನ, ಧರೆಗುರುಳಿದ ಮರಗಳು

ಸಿಲಿಕಾನ್ ಸಿಟಿಯಲ್ಲಿ ಮಳೆ ನೀರಿನಲ್ಲಿ  ಮುಳುಗಿದ ಕಾರು ಮುಳುಗಿದ ಪ್ರಕರಣ, ಕಾರಿನಲ್ಲಿ ಸಿಲುಕಿದ್ದ ಯುವತಿ ದುರ್ಮರಣವಾಗಿದ್ದಾಳೆ. ಒಂದೇ ಕುಟುಂಬದ 5 ಮಂದಿ ಸಿಲುಕಿ ದೊಡ್ಡ ಅನಾಹುತ ಸಂಭವಿಸಿದೆ. ಕಾರಿನೊಳಗೆ ಸಿಲುಕಿದ್ದ ಕುಟುಂಬವನ್ನು ಸ್ಥಳೀಯರು ನೀರಿಗೆ ನುಗ್ಗಿ ಕಾಪಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೀರು ಕುಡಿದ ಯುವತಿ ಉಸಿರಾಟಕ್ಕೆ ಸಮಸ್ಯೆ ಎದುರಾಗಿದೆ. ಅವರನ್ನುಕುಡಲೇ ಹತ್ತಿರವಿದ್ದ ಸೇಂಟ್ ಮಾರ್ಥಾಸ್‌ ಆಸ್ಪತ್ರೆಗೆ ರವಾನಿಸಲಾಗಿದೆ. 

ಮಾನವೀಯತೆ ಮರೆತ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಯುವತಿ ಬಲಿ:  ಬೆಂಗಳೂರಿನ ಕೆ.ಆರ್. ಸರ್ಕಲ್‌ ಬಳಿಯ ಅಂಡರ್‌ಪಾಸ್‌ನಲ್ಲಿ ನಿಂತ ನೀರಿನಲ್ಲಿ ಮುಳುಗಿದ ಕಾರನಲ್ಲಿ ಸಿಲುಕಿದ್ದ ಕುಟುಂಬವನ್ನು ರಕ್ಷಣೆ ಮಾಡುವಷ್ಟರಲ್ಲಿ ಯುವತಿ ಹಾಗೂ ವೃದ್ಧೆ ಇಬ್ಬರೂ ನೀರು ಕುಡಿದು ಉಸಿರಾಟ ಸಮಸ್ಯೆ ಅನುಭವಿಸುತ್ತಿದ್ದರು. ಅವರನ್ನು ಕೂಡಲೇ ಹತ್ತಿರದಲ್ಲೇ ಇದ್ದ ಸೇಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಆಸ್ಪತ್ರೆ ಸಿಬ್ಬಂದಿ ಯುವತಿ ಸ್ಥಿತಿ ಗಂಭೀರವಾಗಿದ್ದರೂ ಆಸ್ಪತ್ರೆಗೆ ದಾಖಲಿಸಿಕೊಳ್ಳುವಲ್ಲಿ ನಿರಾಕರಣೆ ಮಾಡಿದ್ದಾಎ. ನಂತರ, ಸರ್ಕಾರಿ ಅಧಿಕಾರಿಗಳು ಬಂದು ಸೂಚನೆ ನೀಡಿದ ನಂತರ ಅವರನ್ನು ಆಸ್ಪತ್ರೆಯೊಳಗೆ ಕರೆದುಕೊಮಡು ಹೋಗಲಾಗಿದೆ. ಆದರೂ ಆಸ್ಪತ್ರೆಯೊಳಗೆ ಇದ್ದ ವೈದ್ಯರು ಚಿಕಿತ್ಸೆ ನೀಡಲು ನಿರಾಕರಣೆ ಮಾಡಿ ಸತಾಯಿಸಿದ್ದಾರೆ. ಈ ಪ್ರಕರಣ ಗಂಭೀರವಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ವೈದ್ಯರಿಗೆ ಸೂಚನೆ ನೀಡಿದ ನಂತರ ಯುವತಿಗೆ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಆದರೆ, ಅಷ್ಟರಲ್ಲಿ ಯುವತಿ ಸ್ಥಿತಿ ಗಂಭೀರವಾಗಿದ್ದುಮ ಪ್ರಾಣಬಿಟ್ಟಿದ್ದಾಳೆ ಎಮದು ಯುವತಿ ಪೋಷಕರು ತಿಳಿಸಿದ್ದಾರೆ. 

ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್: 2.5 ಲಕ್ಷ ಉದ್ಯೋಗ ಭರ್ತಿಗೆ ಕ್ರಮ

ಪ್ರವಾಸ ಮುಗಿಸಿ ಊರಿಗೆ ಹೋಗುವಾಗ ದುರ್ಘಟನೆ: ಇನ್ನು ಬೆಂಗಳೂರಿನಲ್ಲಿ ಕಬ್ಬನ್ ಪಾರ್ಕ್‌ ನೋಡಲು ಬಂದಿದ್ದ ಕುಟುಂಬ ಇನ್ನೇನು ಊರಿಗೆ ಹೋಗಬೇಕು ಎಂದು ಕಾರನ್ನು ಹತ್ತಿ ಹಿರಟಿದ್ದರು. ಜೋರಾಗಿ ಮಳೆ ಬೇಗನೇ ಬೆಂಗಳೂರಿನ ಟ್ರಾಫಿಕ್‌ ದಾಟಿಕೊಳ್ಳುವ ಆಲೋಚನೆಯಲ್ಲಿದ್ದರು. ಆದರೆ, ಅಂಡರ್‌ಪಾಸ್‌ನಲ್ಲಿ ಜವರಾಯ ಕಾದುಕುಳಿತಿದ್ದನು. ಅಂಡರ್‌ಪಾಸ್‌ನ ನೀರಿನಲ್ಲಿ ಕಾರು ಸಿಲುಕಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದವರು ಜೋರಾಗಿ ಕಿರುಚೋಕೆ ಶುರು ಮಾಡಿದ್ದಾರೆ‌. ಈ ವೇಳೆ ಅಂಡರ್ ಪಾಸ್ ಮೇಲಿದ್ದ ಬೇರೆ ಸವಾರರು ನೋಡಿ ಸಹಾಯ ಮಾಡಲು ಮುಂದಾಗಿದ್ದಾರೆ. ಸೀರೆ ಬಿಟ್ಟು ಕೆಳಗಡೆ ಇರೋರನ್ನ ಮೇಲೆತ್ತಲು ಹರಸಾಹಸ ಮಾಡಿದ್ದಾರೆ. ಆದರೆ, ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಯುವತಿಯನ್ನ ರಕ್ಷಣೆ ಮಾಡುವ ವೇಳೆಗೆ ಮತ್ತಷ್ಟು ತಡವಾಗಿದೆ. ಜೊತೆಗೆ, ಆಸ್ಪತ್ರೆ ಸಿಬ್ಬಂದಿಯೂ ನಿರ್ಲಕ್ಷ್ಯ ಮಾಡಿದ್ದರಿಂದ ಯುವತಿ ಪ್ರಾಣಪಕ್ಷಿ ಹಾರಿಹೋಗಿದೆ.

ಸಿದ್ದರಾಮಯ್ಯ ಸಿಎಂ ಆದ ದಿನವೇ ಶುಭಸೂಚನೆ: ರಾಜ್ಯ ವಿವಿಧೆಡೆ ಭರ್ಜರಿ ಮಳೆ

5 ಲಕ್ಷ ರೂ. ಪರಿಹಾರ ಘೋಷಣೆ: ಇನ್ನು ಆಂಧ್ರಪ್ರದೇಶದಿಂದ ಪ್ರವಾಸಕ್ಕೆ ಆಗಮಿಸಿದ್ದ ಕುಟುಂಬದ ಯುವತಿ ಮೃತಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ, ಮೃತ ಯುವತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ನೀರಿನಲ್ಲಿ ಸಿಲುಕಿ ಚಿಕಿತ್ಸೆಗೆ ಆಗಮಿಸಿದವರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವಿಚಾರವಾಗಿ ಯಾವುದೇ ತಪ್ಪು ಸಂಭವಿಸಿರುವುದು ಸಾಬೀತಾದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Follow Us:
Download App:
  • android
  • ios